ಮುಂದಿನ ಶೈಕ್ಷಣಿಕ ವರ್ಷ ಆರಂಭದ ಬಗ್ಗೆ ಸರಕಾರ ನಿರ್ಧಾರ
ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಆಗಿ ಪರಿಗಣಿಸಿ
ಪ್ರಧಾನಿಗೆ ಸುರೇಶ್ ಕುಮಾರ್ ಮನವಿ
ಬೆಂಗಳೂರು, ಜನವರಿ 29, 2021: ರಾಜ್ಯ ಸರಕಾರವು ಮುಂದಿನ ಶೈಕ್ಷಣಿಕ ವರ್ಷ ಆರಂಭದ ಬಗ್ಗೆ ನಿರ್ಧಾರ ತೆಗೆದುಕೊಂಡಿದೆ.
“ಜೂನ್ ಅಂತ್ಯಕ್ಕೆ ಪರೀಕ್ಷೆಗಳು ಮುಗಿದು ಫಲಿತಾಂಶ ಘೋಷಣೆಯಾಗುವುದರೊಂದಿಗೆ 2021ರ ಜುಲೈ 1ರಿಂದ 2021-22ನೇ ಶೈಕ್ಷಣಿಕ ವರ್ಷ ಆರಂಭವಾಗಲಿದೆ,” ಎಂದು ಸಚಿವ ಸುರೇಶ ಕುಮಾರ್ ಇಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಇದನ್ನೂ ಓದಿ: ಶಾಲಾ ಶುಲ್ಕ ನಿಗದಿಪಡಿಸಿದ ಸರಕಾರ
ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಆಗಿ ಪರಿಗಣಿಸಿ
ಪ್ರಧಾನಿಗೆ ಸುರೇಶ್ ಕುಮಾರ್ ಮನವಿ
ರಾಜ್ಯದೆಲ್ಲೆಡೆಯ ಶಾಲಾ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೆ ಕೋವಿಡ್ ಲಸಿಕೆ ನೀಡಲು ಆದ್ಯತೆ ನೀಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷ ವರ್ಧನ್ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಶುಕ್ರವಾರ ಪ್ರಧಾನಿ ಮತ್ತು ಆರೋಗ್ಯ ಸಚಿವರಿಗೆ ಪ್ರತ್ಯೇಕ ಪತ್ರ ಬರೆದಿರುವ ಅವರು, ಕೋವಿಡ್ ವಾರಿಯರ್ಸ್ ಗೆ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡುತ್ತಿರುವುದು ಅತ್ಯಂತ ಸಮಂಜಸವಾದ ವಿಚಾರವಾಗಿದೆ. ಅದೇ ರೀತಿ ಶಿಕ್ಷಕರನ್ನೂ ಸಹ ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೂ ಲಸಿಕೆ ನೀಡಲು ಆದ್ಯತೆ ನೀಡಬೇಕೆಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಮೇ 24ರಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ
ಈ ಕುರಿತಂತೆ ಈಗಾಗಲೇ ನಮ್ಮ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗುಹಾ ಅವರಿಗೆ ಪ್ರಸ್ತಾವನೆ ಸಲ್ಲಿಸಿ ಶಿಕ್ಷಣ ಇಲಾಖೆ ನೌಕರರನ್ನೂ ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಲಸಿಕೆ ನೀಡಲು ಆದ್ಯತೆ ನೀಡಬೇಕೆಂದು ಕೋರಿದ್ದಾರೆಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಶಾಲಾ ಶಿಕ್ಷಕರು ಕೋವಿಡ್ ವಾರಿಯರ್ಸ್ ಆಗಿ ಕಂಟೈನ್ಮೆಂಟ್ ವಲಯಗಳಲ್ಲಿ ಕೆಲಸ ಮಾಡುವ ಮೂಲಕ ಕೋವಿಡ್ ತಡೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದಾರೆ. ಶಿಕ್ಷಕರು ಮನೆಮನೆಗೆ ಭೇಟಿ ನೀಡಿ ಅಂಕಿ ಅಂಶ ಸಂಗ್ರಹಣೆ, ಸಾಮಾಜಿಕ ಅಂತರದ ಮಹತ್ವದ ತಿಳಿವಳಿಕೆ ಮೂಡಿಸಿದ್ದಾರೆ. ಆರೋಗ್ಯ ಕಾರ್ಯಕರ್ತರಿಗೆ ಹೆಗಲೆಣೆಯಾಗಿ ದುಡಿದಿದ್ದಾರೆ. ಈಗ ಶಾಲೆಗಳು ಆರಂಭವಾಗಿದ್ದು, ಅವರೆಲ್ಲ ತರಗತಿಗಳಲ್ಲಿ ಮಕ್ಕಳ ಸಮೂಹದ ಸಂಪರ್ಕಕ್ಕೆ ಬರುತ್ತಿರುವುದರಿಂದ ಮಕ್ಕಳ ಮತ್ತು ಅವರ ಹಿತದೃಷ್ಟಿಯಿಂದ ಶಿಕ್ಷಕರಿಗೆ ಲಸಿಕೆ ನೀಡುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಶಿಕ್ಷಕರು ವ್ಯಾಕ್ಸಿನ್ ಪಡೆಯಲು ಅನುವಾಗುವಂತೆ ಶಿಕ್ಷಕರನ್ನು ಕೋವಿಡ್-19 ವಾರಿಯರ್ಸ್ ಎಂದು ಪರಿಗಣಿಸಬೇಕೆಂದು ಕೋರಿ ನಮ್ಮ ರಾಜ್ಯದ ಮುಖ್ಯ ಕಾರ್ಯದರ್ಶಿಯವರು ಸಲ್ಲಿಸಿರುವ ಪ್ರಸ್ತಾವನೆಗೆ ಅನುಮೋದನೆ ನೀಡಬೇಕೆಂದು ಸುರೇಶ್ ಕುಮಾರ್ ಕೋರಿದ್ದಾರೆ.