ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

 ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
Share this post

ಮಂಗಳೂರು, ಜನವರಿ 09, 2021: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ವೆಬ್‍ಸೈಟ್www.ssp.postmatric.karnataka.gov.in ನಲ್ಲಿ ಮಾರ್ಚ್ 5 ರೊಳಗೆ ಅರ್ಜಿ ಸಲ್ಲಿಸಬಹುದು.

ಕಾರ್ಯಕ್ರಮಗಳ ವಿವರ, ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ವೆಬ್‍ಸೈಟ್ www.bcwd.karntaka.gov.in ನಲ್ಲಿ ಮಾಹಿತಿ ಪಡೆಯಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾಧಿಕಾರಿಯವರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆನೆಗುಂಡಿ ರಸ್ತೆ, ಬಿಜೈ-ಕಾಪಿಕಾಡ್, ಮಂಗಳೂರು ಅಥವಾ ದೂರವಾಣಿ ಸಂಖ್ಯೆ: 0824-2225078 ನ್ನು  ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!