ಮಾ. 27 ರಂದು ಮೆಘಾ ಲೋಕ್ ಅದಾಲತ್

 ಮಾ. 27 ರಂದು ಮೆಘಾ ಲೋಕ್ ಅದಾಲತ್
Share this post

ಉಡುಪಿ, ಫೆಬ್ರವರಿ 11, 2021: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಮಾರ್ಚ್ 27 ರಂದು ಮೆಘಾ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಈ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ.

ರಾಜಿಯಾಗಬಲ್ಲ ಅಪರಾಧ ಪ್ರಕರಣಗಳು,ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮ್, ವಿದ್ಯುತ್ ಹಾಗೂ ನೀರಿನ ಶುಲ್ಕ, ವೈವಾಹಿಕ /ಕುಟುಂಬ ನ್ಯಾಯಾಲಯ ಪ್ರಕರಣ, ಭೂಸ್ವಾಧೀನ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ ಪ್ರಕರಣ ಹಾಗೂ ಸಿವಿಲ್ ಪ್ರಕರಣಗಳನ್ನು ರಾಜಿ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು.

ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು.

ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು.

ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜೆ.ಎನ್. ಸುಬ್ರಹ್ಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!