ಸಾರ್ವಜನಿಕರಲ್ಲಿ ಸಾಂಕ್ರಮಿಕ ರೋಗ ಹರಡದಂತೆ ಜಾಗೃತಿ ಮೂಡಿಸಿ – ಜಿಲ್ಲಾಧಿಕಾರಿ ಜಿ ಜಗದೀಶ್

 ಸಾರ್ವಜನಿಕರಲ್ಲಿ ಸಾಂಕ್ರಮಿಕ ರೋಗ ಹರಡದಂತೆ ಜಾಗೃತಿ ಮೂಡಿಸಿ – ಜಿಲ್ಲಾಧಿಕಾರಿ ಜಿ ಜಗದೀಶ್
Share this post

ಉಡುಪಿ, ಫೆಬ್ರವರಿ 11, 2021: ಜನ ಸಾಮಾನ್ಯರಿಗೆ ಸಾಂಕ್ರಾಮಿಕ ರೋಗ ಹರಡಿ, ಅವರಿಗೆ ಚಿಕಿತ್ಸೆ ನೀಡುವ ಬದಲು ಆ ರೋಗದ ಬಗ್ಗೆ ಜಾಗೃತಿ ಮೂಡಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ರೋಗ ಹರಡದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶ್ರೀಕೃಷ್ಣ ಸಭಾಂಗಣದಲ್ಲಿ
ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಉಡುಪಿ, ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣ ಘಟಕ ಮತ್ತು ಎನ್‌ವಿಬಿಡಿಸಿಪಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಮಂಗನ ಕಾಯಿಲೆ ಅಂತರ್-ಇಲಾಖಾ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಹೊಂದುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ, ಸಾಂಕ್ರಾಮಿಕ ರೋಗಗಳು ಹರಡಿದಾಗ ಆ ಬಗ್ಗೆ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿದಾಗ ಮಾತ್ರ ರೋಗ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

ಮಂಗನ ಕಾಯಿಲೆ ರೋಗವು ಮಂಗಗಳು ಸತ್ತಾಗ ಅವುಗಳ ದೇಹ ಕೊಳೆತು ಉಂಟಾಗುವ ಉಣ್ಣೆಗಳು ಮನುಷ್ಯರಿಗೆ ಕಚ್ಚುವುದರಿಂದ ಉಂಟಾಗುತ್ತದೆ ಎಂದ ಅವರು ಮಂಗನಕಾಯಿಲೆ ಮೊಟ್ಟ ಮೊದಲಿಗೆ ಶಿವಮೊಗ್ಗ ಜಿಲ್ಲೆಯ ಕ್ಯಾಸನೂರು ಗ್ರಾಮದಲ್ಲಿ ಕಂಡುಬಂದ ಹಿನ್ನೆಲೆ ಆ ಹೆಸರನ್ನು ಇಡಲಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಜನ ಸಾಮಾನ್ಯರು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಸ್ವಚ್ಛತೆಗೆ ಆಧ್ಯತೆ ನೀಡುವುದು ಮರೆತಿರುವಂತೆ ಕಂಡು ಬರುತ್ತಿದೆ.

ಈ ರೀತಿಯ ನಿರ್ಲಕ್ಷ್ಯಕ್ಕೆ ಒಳಗಾದಲ್ಲಿ ಸೋಂಕು ಮತ್ತೆ ಉಲ್ಬಣಗೊಳ್ಳುವ ಸಾಧ್ಯತೆಗಳಿವೆ, ಇದಕ್ಕೆ ಆಸ್ಪದ ನೀಡಬಾರದು ಎಂದರು.

ವಿದ್ಯಾ ಸಂಸ್ಥೆಗಳು , ಹಾಸ್ಟೆಲ್‌ಗಳು ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಸೋಂಕು ಇರುವುದು ಕಂಡು ಬಂದಲ್ಲಿ ಅವುಗಳನ್ನು ಕಂಟೈನ್ಮೆಂಟ್ ಝೋನ್‌ಗಳಾಗಿ ಘೋಷಿಸುವುದರೊಂದಿಗೆ ಸೋಂಕು ಹರಡದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ತಡೆಯಬೇಕು ಎಂದರು.

ಕೊರೋನಾ ಸೋಂಕು ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಉತ್ತಮ ಕಾರ್ಯವನ್ನು ಮಾಡುವುದರೊಂದಿಗೆ ಆರೋಗ್ಯ ಇಲಾಖೆಯಲ್ಲಿ ಕೈಜೋಡಿಸಿದ ಹಿನ್ನೆಲೆಯಲ್ಲಿ ವ್ಯಾಪಕವಾಗಿ ಹರಡುವುದನ್ನು ತಡೆಯಲು ಸಾಧ್ಯವಾಯಿತು ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಢ ಮಾತನಾಡಿ ಕೋವಿಡ್
ಸಮಯದಲ್ಲಿ ಅದರ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳು ಉತ್ತಮ ಮಾರ್ಗದರ್ಶನ ಹಾಗೂ ಸಲಹೆಗಳನ್ನು ನೀಡಿ ಸೋಂಕು ಹೆಚ್ಚು ಹರಡದಂತೆ ತಡೆಯಲು ಸಹಕರಿಸಿದರು ಇದಕ್ಕೆ ಆರೋಗ್ಯ ಇಲಾಖೆ ವತಿಯಿಂದ ಅಭಿನಂದನೆಗಳನ್ನು ತಿಳಿಸಿದರು.

Subscribe to our newsletter!

Other related posts

error: Content is protected !!