ಬಿ.ಪಿ.ಎಲ್. ಕಾರ್ಡ್: ಅರ್ಜಿ ಸಲ್ಲಿಸಲು ಅವಕಾಶ

 ಬಿ.ಪಿ.ಎಲ್. ಕಾರ್ಡ್: ಅರ್ಜಿ ಸಲ್ಲಿಸಲು ಅವಕಾಶ
Share this post

ಉಡುಪಿ ಫೆಬ್ರವರಿ 12, 2021: ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವ ಕಾರ್ಯ ಪುನರ್ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರಿಗೆ ಹೊಸದಾಗಿ ಆದ್ಯತಾ ಪಡಿತರ ಚೀಟಿ ಹೊಂದಲು ಅವಕಾಶ ಕಲ್ಪಿಸಲಾಗಿದೆ.

ಈ ಕೆಳಕಂಡ ಮಾನದಂಡಗಳನ್ನು ಹೊಂದಿರುವವರು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಾಗಿರುವುದಿಲ್ಲ:

  • ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ ಮಂಡಳಿಗಳು/ ನಿಗಮಗಳು/ಸ್ವಾಯತ್ತ ಸಂಸ್ಥೆಗಳು.
  • ಆದಾಯ ತೆರಿಗೆ / ಸೇವಾ ತೆರಿಗೆ / ವ್ಯಾಟ್/ ವೃತ್ತಿ ತೆರಿಗೆ  ಪಾವತಿಸುವ ಎಲ್ಲಾ ಕುಟುಂಬಗಳು.
  • ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.
  • ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು
  • ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Subscribe to our newsletter!

Other related posts

error: Content is protected !!