ಧರ್ಮಸ್ಥಳದಲ್ಲಿ ಯುವ ಕಲಾಮಣಿ ಪ್ರಶಸ್ತಿ ಪ್ರದಾನ

 ಧರ್ಮಸ್ಥಳದಲ್ಲಿ ಯುವ ಕಲಾಮಣಿ ಪ್ರಶಸ್ತಿ ಪ್ರದಾನ

ಚಿತ್ರ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಶಸ್ತಿ ಪ್ರದಾನ ಮಾಡಿದರು.

Share this post

ಮಣಿಕೃಷ್ಣ ಸ್ವಾಮಿ ಅಕಾಡಮಿ: ಯುವ ಕಲಾಮಣಿ ಪ್ರಶಸ್ತಿ ಪ್ರದಾನ

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಶಸ್ತಿ ಪ್ರದಾನ ಮಾಡಿದರು.

ಧರ್ಮಸ್ಥಳ, ಫೆ 14, 2021: ಸಂಗೀತ ನಿತ್ಯನೂತನವಾಗಿದ್ದು ಅದು ಅವಿನಾಶಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಧರ್ಮಸ್ಥಳದಲ್ಲಿ ಮಣಿಕೃಷ್ಣ ಸ್ವಾಮಿ ಅಕಾಡೆಮಿ ಆಶ್ರಯದಲ್ಲಿ ಭಾನುವಾರ ಯುವ ಕಲಾಮಣಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಭಾರತೀಯ ಶಾಸ್ತ್ರೀಯ ಸಂಗೀತಕ್ಕೆ ವಿದೇಶಗಳಲ್ಲಿಯೂ ವಿಶೇಷ ಗೌರವ, ಪ್ರೋತ್ಸಾಹ ಸಿಗುತ್ತದೆ.
ಯುವ ಜನತೆ ಹಾಗೂ ಎಳೆಯ ಮಕ್ಕಳು ಕೂಡಾ ಇಂದು ಆಸಕ್ತಿಯಿಂದ ಸಂಗೀತ ಅಭ್ಯಾಸ ಮಾಡುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಬಾಲ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಪ್ರಶಸ್ತಿ ಪ್ರದಾನ: ಸುರತ್ಕಲ್‍ನ ಶ್ರೇಯಾ ಕೊಳತ್ತಾಯರಿಗೆ ಯುವ ಕಲಾಮಣಿ ಪ್ರಶಸ್ತಿ, ಸುನಾದಕೃಷ್ಣ ಅಮೈ ರಿಗೆ ಮಣಿ ಎಂ.ಕೆ. ವಾರ್ಷಿಕ ಪ್ರಶಸ್ತಿ, ನಾಗೇಶ್ ಬಪ್ಪನಾಡು ಅವರಿಗೆ ಈಶ್ವರಯ್ಯ ಸಂಸ್ಮರಣಾ ಪ್ರಶಸ್ತಿ ಮತ್ತು ಉಡುಪಿಯ ಕೆ.ಯು. ರಾಘವೇಂದ್ರ ರಾವ್ ಅವರಿಗೆ ಹಿರಿಯ ಸಾಧಕ ಸನ್ಮಾನ ಪುರಸ್ಕಾರ ನೀಡಿ ಗೌರವಿಸಲಾಯಿತು.

ಮಣಿಕೃಷ್ಣ ಸ್ವಾಮಿ ಅಕಾಡಮಿಯ ಅಧ್ಯಕ್ಷ ಗಣೇಶ್ ಕಾರ್ಣಿಕ್ ಸ್ವಾಗತಿಸಿದರು. ಕಾರ್ಯದರ್ಶಿ ನಿತ್ಯಾನಂದ ರಾವ್ ಧನ್ಯವಾದವಿತ್ತರು.

• ಮಣಿಕೃಷ್ಣ ಸ್ವಾಮಿ ಅಕಾಡೆಮಿ ಆಶ್ರಯದಲ್ಲಿ ಕೊರೊನಾ ಪೀಡಿತ ಅವಧಿಯಲ್ಲಿ ಆನ್‍ಲೈನ್ ಮೂಲಕ 600 ಸಂಗೀತ ಕಾರ್ಯಕ್ರಮ ನೀಡಿದ್ದು 12 ಲಕ್ಷ ರೂ. ದೇಣಿಗೆ ಸಂಗ್ರಹವಾಗಿದೆ.
• ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ವೀಣೆ ಶೇಷಣ್ಣ ಬಳಸುತ್ತಿದ್ದ ವೀಣೆಯನ್ನು ಸಂರಕ್ಷಿಸಿ ಪ್ರದರ್ಶನಕ್ಕೆ ಇಡಲಾಗಿದೆ. ಅವರ ಹೆಸರಿನಲ್ಲಿ ಪ್ರತಿವರ್ಷ ಧರ್ಮಸ್ಥಳದ ವತಿಯಿಂದ ಒಬ್ಬ ಕಲಾವಿದರಿಗೆ ರೂ. 25,000/- ನಗದು ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.

Subscribe to our newsletter!

Other related posts

error: Content is protected !!