ಧರ್ಮಸ್ಥಳ ಉಚಿತ ಸಾಮೂಹಿಕ ವಿವಾಹ: ನೋಂದಣಿ ಕಚೇರಿ ಉದ್ಘಾಟನೆ

 ಧರ್ಮಸ್ಥಳ ಉಚಿತ ಸಾಮೂಹಿಕ ವಿವಾಹ: ನೋಂದಣಿ ಕಚೇರಿ ಉದ್ಘಾಟನೆ
Share this post
ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ: ನೋಂದಣಿ ಕಚೇರಿ ಉದ್ಘಾಟನೆ

ಧರ್ಮಸ್ಥಳ ಫೆ 15, 2021: ಧರ್ಮಸ್ಥಳದಲ್ಲಿ 49ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಏಪ್ರಿಲ್ 29 ರಂದು ಗುರುವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮೂರ್ತದಲ್ಲಿ ನಡೆಯಲಿದೆ.

ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿಯನ್ನು ಸೋಮವಾರ ಧರ್ಮಸ್ಥಳದಲ್ಲಿ ಬಸ್ ನಿಲ್ದಾಣದ ಬಳಿ ಇರುವ ಮಾಹಿತಿ ಕಛೇರಿಯ ಕಟ್ಟಡದಲ್ಲಿ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿಯವರು ಉದ್ಘಾಟಿಸಿ ಶುಭ ಹಾರೈಸಿದರು.

ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ ಮಾಸ್ಟರ್ ಮತ್ತು ಇತರರು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!