ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಕಾನೂನು ಮಾಹಿತಿ ಶಿಬಿರ ಹಾಗೂ ವೈದ್ಯಕೀಯ ಶಿಬಿರ
ಮಂಗಳೂರು, ಫೆಬ್ರವರಿ 17, 2021: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಇಲಾಖೆ, ವಕೀಲರ ಸಂಘ ಮಂಗಳೂರು ಮತ್ತು ಎಂಡೋ ವಿರೋಧಿ ಹೋರಾಟ ಸಮಿತಿ ಕೊಕ್ಕಡ ಇವರುಗಳ ಜಂಟಿ ಆಶ್ರಯದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಕಾನೂನು ಮಾಹಿತಿ ಶಿಬಿರ ಹಾಗೂ ವೈದ್ಯಕೀಯ ಶಿಬಿರವನ್ನು ಫೆಬ್ರವರಿ 18 ರಂದು ಬೆಳಿಗ್ಗೆ 10.30 ಗಂಟೆಗೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಗಣೇಶ ಕಲಾ ಮಂದಿರಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶಿಲ್ಪಾ ಎ.ಜಿ. ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಹಾಯಕ ನಿರ್ದೇಶಕರು ಎ.ಡಿ. ಬೋಪಯ್ಯ, ತಹಶೀಲ್ದಾರಳಾದ ರಶ್ಮಿ ಎಸ್.ಆರ್., ಹಾಗೂ ಮಹೇಶ್ ಜೆ., ಟಿ. ರಮೇಶ್ ಜೆ., ಅನಂತ ಶಂಕರ್ ಬಿ., ಅನಿತಾಲಕ್ಷ್ಮಿ ಎಸ್., ಮಂಗಳೂರು ವಕೀಲ ಸಂಘದ ಅಧ್ಯಕ್ಷ ಎನ್.ಎನ್. ಹೆಗ್ಡೆ, ಹಾಗೂ ಪ್ರಧಾನ ಕಾರ್ಯದರ್ಶಿ ಹೆಚ್.ವಿ. ರಾಘವೇಂದ್ರ, ಮಾನವ ಹಕ್ಕು ಹಿತರಕ್ಷಣಾ ಪ್ರತಿಷ್ಠಾನ(ರಿ) ಉಡುಪಿ ಸಂಚಾಲಕ ಡಾ. ರವೀಂದ್ರನಾಥ ಶಾನುಬಾಗ್, ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಹಕಾರ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಭಾಗವಹಿಸಲಿದ್ದಾರೆ.