ಮರಗಳ ತೆರವು- ಸಾರ್ವಜನಿಕ ಅಹವಾಲು ಸಭೆ
ಉಡುಪಿ ಫೆಬ್ರವರಿ 18, 2021: ಕುಂದಾಪುರ ತಾಲೂಕು ಶಂಕರನಾರಾಯಣ ಗ್ರಾಮದ ಸ.ನಂ: 176/1ಪಿ1 ರಲ್ಲಿ 8.00 ಎಕ್ರೆ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖಾ ಹೆಸರಿನಲ್ಲಿ ಕಾದಿರಿಸಿರುವ ಜಮೀನಿನಲ್ಲಿರುವ 125 ವಿವಿಧ ಜಾತಿಯ ಮರಗಳನ್ನು ಕಡಿಯಲು ಉದ್ದೇಶಿಸಲಾಗಿದೆ.
ಸದ್ರಿ ಸ್ಥಳದಲ್ಲಿರುವ ಮರಗಳು ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆಯಡಿ ಬರುವುದರಿಂದ, ಕಾಯ್ದೆಯ ಪ್ರಕಾರ 50 ಕ್ಕಿಂತ ಹೆಚ್ಚು ಮರಗಳನ್ನು ಕಡಿಯಬೇಕಾದಲ್ಲಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ ಕ್ರಮ ಕೈಗೊಳ್ಳಬೇಕಾಗಿರುವುದರಿಂದ ಮಾರ್ಚ್ 1 ರಂದು ಮಧ್ಯಾಹ್ನ 3 ಗಂಟೆಗೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆಯನ್ನು ಏರ್ಪಡಿಸಲಾಗಿದೆ.
ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಆಕ್ಷೇಪಣೆ ಸಲ್ಲಿಸಬಹುದು ಅಥವಾ ಸದ್ರಿ ದಿನಾಂಕದ ಒಳಗಾಗಿ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ, ಕುಂದಾಪುರ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ [email protected] ನಲ್ಲಿಯೂ ಸಹ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.