ಉಡುಪಿ ಇ-ಸ್ಯಾಂಡ್ ಆ್ಯಪ್ ಮೂಲಕ ಮರಳು ಲಭ್ಯ

 ಉಡುಪಿ ಇ-ಸ್ಯಾಂಡ್ ಆ್ಯಪ್ ಮೂಲಕ ಮರಳು ಲಭ್ಯ
Share this post

ಉಡುಪಿ, ಫೆಬ್ರವರಿ 20, 2021: ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಮುಂಡ್ಲಿ ಡ್ಯಾಮ್‌ನಿಂದ
ಹೂಳೆತ್ತುವ ಕಾರ್ಯವು ಪ್ರಗತಿಯಲ್ಲಿದ್ದು, ಸದರಿ ಹೂಳಿನಲ್ಲಿ ದೊರಕುವ ಮರಳನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಇ-ಸ್ಯಾಂಡ್ ಆ್ಯಪ್‌ನ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿರುತ್ತದೆ.

ಅದ್ದರಿಂದ ಸದರಿ ಮರಳನ್ನು ಪಡೆದುಕೊಳ್ಳಲು ಇಚ್ಚಿಸುವವವರು ಉಡುಪಿ ಇ-ಸ್ಯಾಂಡ್ ಆ್ಯಪ್ ಮುಖಾಂತರ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿಯವರ ಕಛೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2572333 ಅನ್ನು ಸಂಪರ್ಕಿಸುವಂತೆ ಹಿರಿಯ ಭೂ ವಿಜ್ಞಾನಿ ಹಾಗೂ ಜಿಲ್ಲಾ ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!