ಸ್ಫರ್ಧಾತ್ಮಕ ಪರೀಕ್ಷೆ-ನಿಷೇಧಾಜ್ಞೆ ಜಾರಿ
ಉಡುಪಿ, ಫೆಬ್ರವರಿ 20, 2021: ಜಿಲ್ಲೆಯಲ್ಲಿ ಫೆಬ್ರವರಿ 28 ರಂದು ರಾಜ್ಯ ಸಿವಿಲ್ ಸೇವೆಯಡಿ ವಿವಿಧ
ಇಲಾಖೆಗಳಲ್ಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ಜಿಲ್ಲೆಯ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದೆ.
ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಎಲ್ಲಾ ರೀತಿಯ ವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಲು ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ಈ ನಿಷೇಧಾಜ್ಞೆ ಆದೇಶವು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲೂ ಫೆ. 28 ರಂದು ಬೆಳಗ್ಗೆ 8 ಗಂಟೆಯಿAದ ಸಂಜೆ 6 ರ ವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.