ರಸ್ತೆ ಸಂಚಾರ ಗಣತಿ
ಮಂಗಳೂರು, ಫೆಬ್ರವರಿ 21, 2021: ಮಂಗಳೂರು ಲೋಕೋಪಯೋಗಿ ಇಲಾಖಾ ವಿಭಾಗದ ವ್ಯಾಪ್ತಿಯಲ್ಲಿ 2 ದಿನಗಳ ಕಾಲ ರಸ್ತೆ ಸಂಚಾರ ಗಣತಿ ನಡೆಯಲಿದೆ.
ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿನ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಆಯ್ದ ಸ್ಥಳಗಳಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಿ ಸ್ವಯಂಚಾಲಿತ ತಂತ್ರಾಂಶದ ಮೂಲಕ ರಸ್ತೆ ಸಂಚಾರ ಗಣತಿಯನ್ನು ಫೆಬ್ರವರಿ 23 ರಂದು ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 25 ರಂದು ಬೆಳಿಗ್ಗೆ 6ಗಂಟೆಯ ವರೆಗೆ ನಡೆಸಲಾಗುವುದು ಎಂದು ಮಂಗಳೂರು ವಿಭಾಗದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.