ಸಚಿವ ಎಸ್. ಸುರೇಶ್ ಕುಮಾರ್ ದ.ಕ ಜಿಲ್ಲಾ ಪ್ರವಾಸ

 ಸಚಿವ ಎಸ್. ಸುರೇಶ್ ಕುಮಾರ್ ದ.ಕ ಜಿಲ್ಲಾ ಪ್ರವಾಸ
Share this post

ಮಂಗಳೂರು, ಫೆ 26, 2021: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್ ಫೆಬ್ರವರಿ 27 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.

ಫೆಬ್ರವರಿ ಬೆಳಿಗ್ಗೆ 9.05 ಕ್ಕೆ ಮಂಗಳೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಶಕ್ತಿ ಎಜುಕೇಷನ್ ಸೊಸೈಟಿ ಶಾಲೆಯ ನೂತನ ಸಭಾಂಗಣ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ಪುರಭವನದಲ್ಲಿ ನಡೆಯುವ ಪಬ್ಲಿಕ್ ಟಿ.ವಿ ಮತ್ತು ರೋಟರಿ ಸಂಸ್ಥೆಯ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

2019-20 ನೇ ಸಾಲಿನಲ್ಲಿ 10 ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಮತ್ತು ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮ ಹಾಗೂ ಜಿಲ್ಲೆಯ ಎಲ್ಲಾ ತಾಲೂಕಿನ ಪ್ರೌಢಶಾಲೆಗಳ ಮುಖ್ಯೋಪಾಧ್ಯಯರೊಂದಿಗೆ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಕುರಿತ ಸಂವಾದದಲ್ಲಿ ಭಾಗವಹಿಸಲಿದ್ದಾರೆ.  

ರಾತ್ರಿ 7.30 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ.

Subscribe to our newsletter!

Other related posts

error: Content is protected !!