ಸಮಾಜದ ಅಭಿವೃದ್ಧಿಗೆ ಸಂಘಟನೆ ಅವಶ್ಯಕ : ರಘುಪತಿ ಭಟ್

 ಸಮಾಜದ ಅಭಿವೃದ್ಧಿಗೆ ಸಂಘಟನೆ ಅವಶ್ಯಕ : ರಘುಪತಿ ಭಟ್
Share this post

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ) ಬ್ರಾಹ್ಮಿ ಸಭಾಭವನ ಸಮರ್ಪಣಾ ಹಾಗೂ ಅಭಿನಂದನಾ ಕಾರ್ಯಕ್ರಮ

ಉಡುಪಿ ಫೆ 28, 2021: ಸಮಾಜದ ಅಭಿವೃದ್ಧಿಯಲ್ಲಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿ ಆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹಾಯ ಹಸ್ತ ನೀಡಿದಲ್ಲಿ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಸಂಘಟನೆ ಅವಶ್ಯಕ. ಪ್ರಸ್ತುತ ದಿನಗಳಲ್ಲಿ ಬ್ರಾಹ್ಮಣ ಸಮಾಜ ಜಾಗೃತಿ ಯಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಇಂದು ನಡೆದ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ.) ಇದರ ಕಲ್ಸಂಕ ಗುಂಡಿಬೈಲಿನಲ್ಲಿ ನೂತನವಾಗಿ ನಿರ್ಮಿಸಲಾದ ಬ್ರಾಹ್ಮಿ ಸಭಾಭವನ ಸಮರ್ಪಣಾ ಹಾಗೂ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಸರ್ವೇ ಜನಃ ಸುಖಿನೋ ಭವಂತು” ಎಂಬ ವಾಣಿಯಂತೆ ಬ್ರಾಹ್ಮಣರು ಸಮಸ್ತ ಹಿಂದೂ ಧರ್ಮದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದವರು. ಜಾತಿಯಿಂದ ಹಿಂದೂ ಧರ್ಮ ಒಡೆಯದಂತೆ ಬ್ರಾಹ್ಮಣ ಸಮಾಜ ಸಮಸ್ತ ಹಿಂದೂ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು,” ಎಂದರು.

ಇದೇ ವೇಳೆ ಬ್ರಾಹ್ಮಿ ಸಭಾಭವನ ನಿರ್ಮಿಸುವಲ್ಲಿ ಯುವ ಬ್ರಾಹ್ಮಣ ಪರಿಷತ್ (ರಿ.) ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಶ್ರೀ ಪಲಿಮಾರು ಮಠದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಶ್ರೀ ಕಾಣಿಯೂರು ಮಠದ ಶ್ರೀ ಶ್ರೀ ವಿಧ್ಯಾವಲ್ಲಭತಿರ್ಥ ಶ್ರೀಪಾದರು ಶುಭ ಹಾರೈಸಿದರು.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಕರ್ನಾಟಕ ಬ್ಯಾಂಕ್ ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್ ಮಹಾಬಲೇಶ್ವರ, ಉದ್ಯಮಿಗಳಾದ ವಿದ್ಯಾ ಪ್ರಸಾದ್, ಶ್ರೀಕಾಂತ್ ಭಟ್ ಕೆಮ್ತೂರು, ಶ್ರೀಪತಿ ಭಟ್, ವಿ ಅಶೋಕ್ ಕುಮಾರ್ ಮುಖ್ಯಸ್ಥರು ನಿಸರ್ಗ ಆಯುರ್ವೇದಿಕ್ ಮೆಡಿಸಿನ್, ಪಿ.ಎನ್ ಪ್ರಸನ್ನಕುಮಾರ್ ರಾವ್ ಆಡಳಿತ ಮೊಕ್ತೇಸರರು ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪೆರಂಪಳ್ಳಿ, ವಿಜಯ್ ಬಲ್ಲಾಳ್ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಅಧ್ಯಕ್ಷರಾದ ವಿಷ್ಣುಪ್ರಸಾದ್ ಪಾಡಿಗಾರ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಉಪಾಧ್ಯ, ಕೋಶಾಧಿಕಾರಿ ಕುಮಾರಸ್ವಾಮಿ ಉಡುಪ, ಕಟ್ಟಡ ಸಮಿತಿ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಕಾರ್ಯಾಧ್ಯಕ್ಷ ಕೆ.ರಂಜನ್ ಕಲ್ಕೂರ, ಪ್ರಧಾನ ಕಾರ್ಯದರ್ಶಿಎಂ.ಎಸ್ ವಿಷ್ಣು, ಕಾರ್ಯದರ್ಶಿ ಚಂದ್ರಕಾಂತ ಕೆ.ಎನ್ ಮತ್ತು ಎಲ್ಲಾ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!