ಜಿಲ್ಲಾಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ರಚನೆ: ಅರ್ಜಿ ಆಹ್ವಾನ
ಮಂಗಳೂರು, ಮಾರ್ಚ್ 02, 2021: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ(ದೌರ್ಜನ್ಯ ಪ್ರತಿಬಂಧ) ನಿಯಮಗಳ (1995) ರಡಿ ಜಿಲ್ಲಾಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯನ್ನು ರಚಿಸಲು ಪ.ಜಾತಿ ಮತ್ತು ಪ.ಪಂಗಡಕ್ಕೆ ಸೇರಿದ ಹಾಗೂ ಇತರೆ ಸಮುದಾಯದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 5 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಅಶೋಕನಗರ ಅಂಚೆ, ಮಂಗಳೂರು-575006, ದೂರವಾಣಿ ಸಂಖ್ಯೆ:0824-2451237 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.