ದ.ಕ. ಜಿಲ್ಲೆಯಲ್ಲಿ ಬೃಹತ್ ಲೋಕ್ ಅದಾಲತ್
ಮಂಗಳೂರು, ಮಾರ್ಚ್ 02, 2021: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದ.ಕ. ಜಿಲ್ಲೆಯಲ್ಲಿನ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ್ 27 ರಂದು ಬೃಹತ್ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ನ್ಯಾಯಲಯಗಳಲ್ಲಿ ತೀರ್ಮಾನಕ್ಕೆ ಬಾಕಿ ಇರುವ ಮತ್ತು ವ್ಯಾಜ್ಯ ಪೂರ್ವ ಎಲ್ಲಾ ಸಿವಿಲ್ ಸ್ವರೂಪದ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣ, ಮೋಟಾರು ವಾಹನ ಕಾಯ್ದೆಯಡಿ ಪರಿಹಾರಕ್ಕಾಗಿ ಸಲ್ಲಿಸಲಾದ ಅರ್ಜಿಗಳು, ಭೂಸ್ವಾದೀನ ಪರಿಹಾರಕ್ಕಾಗಿ ಸಂಬಂಧಿಸಿದ ಪ್ರಕರಣಗಳು ಇತ್ಯಾದಿಗಳನ್ನು ಬೃಹತ್ ಲೋಕ್ ಅದಾಲತ್ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ಸಾರ್ವಜನಿಕರು ನೇರವಾಗಿ ಅಥವಾ ತಮ್ಮ ವಕೀಲರ ಮೂಲಕ ಲೋಕ್ ಅದಾಲತ್ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.
ಲೋಕ್ ಅದಾಲತ್ನಲ್ಲಿ ಪ್ರಕರಣವನ್ನು ಇತ್ಯರ್ಥ ಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ವಾಪಾಸ್ಸು ಪಡೆಯಬಹುದಾಗಿದೆ.
ಹಾಗೆಯೇ ವ್ಯಾಜ್ಯ ಪೂರ್ವ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವುದೇ ನ್ಯಾಯಾಲಯ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯ ಸಂಕೀರ್ಣ, ಕೊಡಿಯಾಲ್ಬೈಲ್, ಮಂಗಳೂರು, ದೂರವಾಣಿ ಸಂಖ್ಯೆ: 0824-244811, ಮೊಬೈಲ್ ಸಂಖ್ಯೆ: 9480024188 ಅನ್ನುಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.