ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ
ಮಂಗಳೂರು, ಮಾರ್ಚ್ 03: ಪ್ರಸ್ತುತ ಸಾಲಿನ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿವೇತನದ ಅರ್ಜಿಗಳನ್ನು ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ [email protected] ಹಾಗೂ 080-35254757 ಗೆ ಸಂಪರ್ಕಿಸಿ ಅಥವಾ ಆಯಾ ತಾಲೂಕು ಮಾಹಿತಿ ಕೇಂದ್ರಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.