ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Share this post

ಕಾರವಾರ, ಮಾರ್ಚ್ 05, 2021: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ” “ಶುಲ್ಕ ವಿನಾಯಿತಿ” “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯಯೋಜನೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಿಲಾಗಿದೆ.

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಮಾರ್ಚ್ 20 ರವರೆಗೆ ವಿಸ್ತರಿಸಲಾಗಿರುತ್ತದೆ.

ವಿದ್ಯಾರ್ಥಿಗಳು www.ssp.postmatric.karnataka.gov.in ಟಿವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್‍ಸೈಟ್ ವಿಳಾಸ www.bcwd.karnataka.gov.in ಆಗಿರುತ್ತದೆ.

ಹೆಚ್ಚಿನ ಮಾಹಿತಿಗೆ [email protected] ಅಥವಾ ದೂರವಾಣಿ ಸಂಖ್ಯೆ :08382-226589 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಅಧಿಕಾರಿ ವಿರೇಂದ್ರ ಎನ್. ಬಾಡಕರ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!