ಅರ್ಜಿ ಅವಧಿ ವಿಸ್ತರಣೆ
ಉಡುಪಿ, ಮಾರ್ಚ್ 05, 2021: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಪ್ರಸ್ತುತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ಹಾಗೂ ಅಲೆಮಾರಿ/ ಅಲೆ ಅರೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ
ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 20 ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ
www.ssp.postmatric.karnataka.gov.in ಹಾಗೂ ದೂರವಾಣಿ ಸಂಖ್ಯೆ: 0820-2573881 ಅನ್ನು ಸಂಪರ್ಕಿಸುವAತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.