ವಿಕಲಚೇತನರ ಬಸ್ ಪಾಸ್ಗಳ ಮಾನ್ಯತಾ ಅವಧಿ ವಿಸ್ತರಣೆ
ಕಾರವಾರ, ಮಾರ್ಚ್ 05, 2021: ವಿಕಲಚೇತನರ 2020ನೇ ಸಾಲಿನ ಬಸ್ ಪಾಸ್ಗಳ ಮಾನ್ಯತಾ ಅವಧಿಯನ್ನು 2021ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿರಸಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 2020ರ ಡಿ. 26ರಿಂದ ವಿಕಲಚೇತನರ ರಿಯಾಯಿತಿ ಬಸ್ ಪಾಸ್ಗಳನ್ನು ವಿತರಿಸಲು ಹಾಗೂ ಪಾಸುಗಳ ನವೀಕರಣಕ್ಕಾಗಿ 2021ರ ಫೆ. 28ರವರೆಗೆ ಅವಕಾಶ ಕಲ್ಪಿಸಲಾಗಿತ್ತು.
ಆದರೆ ವಿಕಲಚೇತನರು ಅರ್ಜಿ ಸಲ್ಲಿಸಲು ಕೆಲವು ತಾಂತ್ರಿಕ ಸಮಸ್ಯೆಗಳಾಗುತ್ತಿದೆ.
ಅಲ್ಲದೇ ಕಳೆದ ಸಾಲಿನ ಬಸ್ ಪಾಸ್ನ ಮಾನ್ಯತೆಯನ್ನು ವಿಸ್ತರಿಸುವಂತೆ ಮನವಿ ಮಾಡಿದ್ದು, ಆಡಳಿತಾತ್ಮಕ ಕಾರಣಗಳ ಮೇರೆಗೆ ಮನವಿಗಳನ್ನು ಗಮನದಲ್ಲಿರಿಸಿಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.