ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ

ಉಡುಪಿ, ಮಾರ್ಚ್ 08, 2021: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಅಂಗಡಿ ಮುಂಗಟ್ಟು, ಹೋಟೆಲ್, ಕಂಪೆನಿಗಳು ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು.
ಈ ಸಂಬಂಧ ಉಡುಪಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ ಎಂದು ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.