ಭ್ರೂಣಲಿಂಗ ಪತ್ತೆ ಕಾಯಿದೆ ಕುರಿತು ಕಾರ್ಯಾಗಾರ

 ಭ್ರೂಣಲಿಂಗ ಪತ್ತೆ ಕಾಯಿದೆ ಕುರಿತು ಕಾರ್ಯಾಗಾರ
Share this post

ಉಡುಪಿ, ಮಾರ್ಚ್ 09, 2021: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಕ್ಷಮ ಪ್ರಾಧಿಕಾರ ಪಿಸಿ & ಪಿ.ಎನ್.ಡಿ.ಟಿ ಹಾಗೂ ಕಾನೂನು ಸೇವಾ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಕುರಿತು ಕಾರ್ಯಾಗಾರವು ಮಾರ್ಚ್ 10 ರಂದು ಬೆಳಗ್ಗೆ 10.30 ಕ್ಕೆ ಅಜ್ಜರಕಾಡು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಾಗಾರವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಉದ್ಘಾಟಿಸಲಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಅಧ್ಯಕ್ಷತೆ ವಹಿಸಲಿದ್ದಾರೆ.

Subscribe to our newsletter!

Other related posts

error: Content is protected !!