ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ
ಉಡುಪಿ, ಮಾಚ್ 10, 2021: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ( ನಿಮ್ಹಾನ್ಸ್) ಇವರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರಾಗಿ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ ತೇರ್ಗಡೆ ಹೊಂದಿದ ಆಸಕ್ತ 21 ರಿಂದ 35 ವಯೋಮಿತಿಯೊಳಗಿನ ಯುವಕ / ಯುವತಿಯರು ತಮ್ಮ ಸ್ವ ವಿವರಗಳನ್ನು ಮಾರ್ಚ್ 20 ರ ಒಳಗೆ ಜಿಲ್ಲಾ ಯುವ ಸಬಲೀಕರಣ ಕ್ರೀಡಾ ಇಲಾಖೆ, ಉಡುಪಿ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನ ಕೇಂದ್ರದ ದೂರವಾಣಿ ಸಂಖ್ಯೆ : 0280-2533933 (9902158073, 8495826518) ಅನ್ನು ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.