‘ಕೋವಿಡ್-19 ಎರಡನೇ ಅಲೆ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ’

 ‘ಕೋವಿಡ್-19 ಎರಡನೇ ಅಲೆ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ’
Share this post
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ‘ಉತ್ತರ ಕನ್ನಡ ಜಿಲ್ಲೆಯ ಅಂಕಿ ಅಂಶಗಳ ನೋಟ, ಎಂಬ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು

ಕಾರವಾರ ಮಾ. 15, 2021: ಕೋವಿಡ್-19 ಎರಡನೇ ಅಲೆಯು ಮರಕಳಿಸುವ ಲಕ್ಷಣ ಕಂಡುಬರುತ್ತಿದ್ದು, ಇದರ ತಡೆಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಸೋಮವಾರ ನಡೆದ ಜಿಲ್ಲಾ ಪಂಚಾಯತ್‍ನ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕರೋನಾ ನಿಯಂತ್ರಣದಲ್ಲಿದೆ ಎಂಬ ವಿಶ್ವಾಸದಲ್ಲಿ ಪ್ರತಿಯೊಬ್ಬ ನಾಗರಿಕರಿದ್ದಾರೆ. ಆದರೆ ಮಹರಾಷ್ಟ್ರ, ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೋವಿಡ್-19 ಎರಡನೇ ಅಲೆಯ ಅಬ್ಬರ ಜೋರಾಗಿದೆ. ಹೀಗಾಗಿ ಆರೋಗ್ಯ ತಪಾಸಣೆ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಕುರಿತು ಹೆಚ್ಚಿನ ಪ್ರಮಾಣದಲ್ಲಿ ಅರಿವು ಮೂಡಿಸಬೇಕಿದೆ. ಜೊತೆಗೆ ಬೇರೆ ಬೇರೆ ರಾಜ್ಯದಿಂದ ಜಿಲ್ಲೆಗೆ ಆಗಮಿಸುವವರ ಬಗ್ಗೆ ಆರೋಗ್ಯ ಇಲಾಖೆ ನಿಗಾವಹಿಸಬೇಕು. ಜೊತೆಗೆ ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ವಿಶ್ವಾಕ್ಕೆ ತೆಗೆದುಕೊಂಡು ಲಸಿಕೆ ವಿತರಣೆಗೆ ಮುಂದಾಗಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶರದ್ ನಾಯಕ್ ಮಾತನಾಡಿ, ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರ ಸರಕಾರ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬೇರೆ ರಾಜ್ಯದಿಂದ ಬಂದವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಜಿಲ್ಲೆಯಲ್ಲಿ ಮಾರ್ಚ 1 ರಿಂದ ಮೂರನೇ ಹಂತದಲ್ಲಿ 60 ವರ್ಷದ ಮೇಲ್ಪಟ್ಟ ಎಲ್ಲಾ ನಾಗರೀಕರು, 45 ರಿಂದ 59 ವರ್ಷದ ವಯೋಮಾನದ ಅo-ಒoಡಿbiಜiಣಥಿ ಇರುವ ನಾಗರೀಕರಿಗೆ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಈ ಹಂತದಲ್ಲಿ ಜಿಲ್ಲೆಯ 1.30 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಈವರೆಗೆ 13 ಸಾವಿರ ಜನರಿಗೆ ಲಸಿಕೆ ವಿತರಿಸಲಾಗಿದೆ ಎಂದರು.

ಮಾ. 8ರಿಂದ ಜಿಲ್ಲೆಯ ಎಲ್ಲ ನಗರ ಹಾಗೂ ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾ ಹಾಗೂ ತಾಲೂಕ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಕೋವಿಶಿಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡಿದ್ದರಿಂದ ಯಾವುದೇ ಅಡ್ಡ ಪರಿಣಾಮಗಳು ಕಂಡುಬಂದಿಲ್ಲ. ಸಾರ್ವಜನಿಕರು ಸಹ ಹೆಚ್ಚಿನ ಕಾಳಜಿವಹಿಸಿ ನಿರ್ಭೀತಿಯಿಂದ ಸಮೀಪದ ಆರೋಗ್ಯ ಕೇಂದ್ರ ಹಾಗೂ ಆಸ್ಪತ್ರೆಗಳಿಗೆ ತೆರಳಿ ಲಸಿಕೆ ಪಡೆದುಕೊಳ್ಳಬಹುದು ಎಂದರು.

ನಾಗರೀಕರು ತಾವಾಗಿಯೇ ಕೋವಿನ್ ತಂತ್ರಾಂಶದಲ್ಲಿ ಹೆಸರು ನೋಂದಣಿ ಮಾಡಿಕೊಂಡು ತಮಗೆ ಅನುಕೂಲವಿರುವ ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆಯಬಹುದು. ಅಲ್ಲದೇ ನೇರವಾಗಿ ಲಸಿಕಾ ಕೇಂದ್ರಕ್ಕೆ ತೆರಳಿ ಹೆಸರು ನೋಂದಾಯಿಸಿಕೊಂಡು ಕೂಡಾ ಲಸಿಕೆ ಪಡೆಯಲು ಅವಕಾಶವಿದೆ. ಸ್ವಯಂ ಪ್ರೇರಿತರಾಗಿ ಲಸಿಕೆ ಪಡೆಯುವ ಕುರಿತು ಪ್ರತಿಯೊಬ್ಬರೂ ಜಾಗೃತರಾಗುವ ಅಗತ್ಯವಿದೆ. ಸಾರ್ವಜನಕರು ಲಸಿಕಾ ಕೇಂದ್ರಕ್ಕೆ ಭೇಟಿ ನೀಡುವಾಗ ಆಧಾರ್ ಕಾರ್ಡ್, ವೋಟರ್ ಐಡಿ ಅಥವಾ ಯಾವುದಾದರೊಂದು ಫೆÇೀಟೋ ಇರುವ ಐ.ಡಿ ಕಾರ್ಡ್‍ನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು ಎಂದು ಹೇಳಿದರು.

ಇದೇ ವೇಳೆ ಶಿಕ್ಷಣ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸಣ್ಣ ನೀರಾವರಿ, ರಾಷ್ಟ್ರೀಯ ಹೆದ್ದಾರಿ, ಹೆಸ್ಕಾಂ, ಆಯುಷ ಇಲಾಖೆ, ಸಮಾಜ ಕಲ್ಯಾಣ, ರೇಷ್ಮೆ, ಸಹಕಾರ, ಖಾಗ್ರಾ, ಪಶುಪಾಲನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮಾಸಿಕ ಪ್ರಗತಿಯನ್ನು ಪರಿಶೀಲನೆ ಮಾಡಲಾಯಿತು.

ಸಭೆಗೂ ಮುನ್ನ 2019-20ನೇ ಸಾಲಿನ ‘ಉತ್ತರ ಕನ್ನಡ ಜಿಲ್ಲೆಯ ಅಂಕಿ ಅಂಶಗಳ ನೋಟ’ ಎಂಬ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು.

ಜಿಲ್ಲಾ ಪಂಚಾಯತ್‍ನ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಬಸವರಾಜ ದೊಡ್ಮಮನಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಅಧ್ಯಕ್ಷೆ ಚೈತ್ರಾ ಕೋಠಾರಕರ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷೆ ಉಷಾ ನಾಯ್ಕ ಹಾಗೂ ಜಿಲ್ಲಾ ಪಂಚಾಯತ್‍ನ ಸಿಇಒ ಪ್ರಿಯಾಂಗಾ ಎಂ. ಸೇರಿದಂತೆ ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!