ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಮಂಗಳೂರು, ಮಾರ್ಚ್ 15, 2021: ಜಿಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಜಿಲ್ಲೆಯ ಪ್ರತೀ ತಿಂಗಳ ಮೂರನೇ ಮಂಗಳವಾರ, ಬುಧವಾರ ಮತ್ತು ಶನಿವಾರದಂದು ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗಿದೆ.
ಮಾರ್ಚ್ 16 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ¯ ಹಾಗೂ ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಮಾರ್ಚ್ 17 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಮಾರ್ಚ್ 20 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.