ಕಾರವಾರ: ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ
ಕಾರವಾರ, ಮಾರ್ಚ್ 16, 2021: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ದಿವೇಕರ ವಾಣಿಜ್ಯ ಮಹಾವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ 17 ರಂದು ಬೆಳಗ್ಗೆ 11 ಗಂಟೆಗೆ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಉದ್ಘಾಟಿಲಿದ್ದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಗೋವಿಂದಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ. ಹಾಗೂ ಜಿಲ್ಲಾ ಗ್ರಾಹಕರ ವಾಜ್ಯಗಳ ಪರಿಹಾರ ಆಯೋಗದ ಪ್ರಭಾರ ಅಧ್ಯಕ್ಷರಾದ ನಜೀರ್ ಅಹ್ಮದ್ ಯು. ಶೇಖ್ ಅವರು ಮುಖ್ಯ ಅಥಿಗಳಾಗಿ ಭಾಗವಹಿಸುವರು.
ಕರ್ನಾಟಕ ವಿಶ್ವ ವಿದ್ಯಾಲಯ ಪಿ. ಜಿ. ಕೇಂದ್ರ ಮತ್ತು ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಕೇಶವ ಕೆ. ಜಿ. ಅವರು ಗ್ರಾಹಕ ಜಾಗೃತಿ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ಮಂಜುನಾಥ ರೇವಣಕರ ತಿಳಿಸಿದ್ದಾರೆ.