ಕಾರವಾರ:ಹೋಟೆಗಾಳಿಯಲ್ಲಿ ಗ್ರಾಮ ವಾಸ್ತವ್ಯ

A path leading to Soorli and nearby villages in Belthangady Taluk.
ಕಾರವಾರ, ಮಾರ್ಚ್ 16, 2021: ತಾಲೂಕಿನ ಸಾವಂತವಾಡಾ ಹೋಬಳಿಯ ಹೋಟೆಗಾಳಿ ಗ್ರಾಮದಲ್ಲಿ ಮಾರ್ಚ್ 20 ರಂದು ಕಂದಾಯ ಹಾಗೂ ಇತರೇ ಇಲಾಖೆಯ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ತಹಶೀಲ್ದಾರ್ ಆರ್ ವಿ ಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಿಗ್ಗೆ 10 ಗಂಟೆಯಿಂದ ಹೋಟೆಗಾಳಿಯ ಆದರ್ಶ ವಿದ್ಯಾಲಯ ಆವರಣದಲ್ಲಿ ಕಾರ್ಯಕ್ರಮ ಜರುಗಲಿದ್ದು ಮೂಲಭೂತ ಸೌಕರ್ಯಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಕುಂದು ಕೊರತೆಗಳ ಕಡೆಗೆ ಗಮನ ಹರಿಸಲಿದ್ದು, ಸಾರ್ವಜನಿಕರಿಂದ ಅರ್ಜಿ ಸ್ವಿಕಾರ, ಅರ್ಜಿಗಳ ಮೇಲೆ ಆಯಾ ಇಲಾಖಾ ವತಿಯಿಂದ ಸ್ಥಳದಲ್ಲಿಯೇ ತಕ್ಷಣ ಪರಿಹಾರ ಕ್ರಮಕೈಗೊಳ್ಳಲಾಗುವುದು.
ಕಂದಾಯ ಮತ್ತು ಇತರೇ ಇಲಾಖೆಯ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಿ ಸಾರ್ವಜನಿಕರ ಕುಂದು ಕೊರತೆಗಳಿಗೆ ಸ್ಪಂದಿಸಲಿರುವುದರಿಂದ ಎಲ್ಲಾ ಸಾರ್ವಜನಿಕರು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆಂದು ತಹಶೀಲ್ದಾರ್ ಕೋರಿದ್ದಾರೆ.