ದ.ಕ: ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ
ಮಂಗಳೂರು, ಮಾರ್ಚ್ 17, 2021: ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂದು ಸರ್ಕಾರದ ಆಶಯದಂತೆ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಂಡು ಸ್ಥಳದಲ್ಲೇ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮಾರ್ಚ್ 20 ರಂದು ಶನಿವಾರ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ಗ್ರಾಮ ವಾಸ್ತವ್ಯ ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಜೊತೆಗಿದ್ದು, ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲೇ ಬಗೆಹರಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.