ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ತಾಲೂಕು ಭೇಟಿ, ದೂರು ಸ್ವೀಕಾರ
ಮಂಗಳೂರು, ಮಾರ್ಚ್ 17, 2021: ದ.ಕ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾರ್ಚ್ 19, 25 ಮತ್ತು 26 ರಂದು ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು.
- ಮಾರ್ಚ್ 19 ರಂದು ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ,
- ಮದ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಬಂಟ್ವಾಳ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ,
- ಮಾರ್ಚ್ 25 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ,
- ಮದ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ತಾಲೂಕು ಸರ್ಕಾರಿ ಪ್ರವಾಸಿ ಮಂದಿರ,
- ಮಾರ್ಚ್ 26 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯ ವರೆಗೆ ಮೂಡಬಿದ್ರೆ ತಾಲೂಕು ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000 ಸಂಪರ್ಕಿಸುವಂತೆ ಮಂಗಳೂರು ಪೊಲೀಸ್ ನಿರೀಕ್ಷಕರು, ಎಸಿಬಿ, ಶ್ಯಾಮ್ ಸುಂದರ್ ಹೆಚ್.ಎಂ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.