ಸ್ವಯಂ ಉದ್ಯೋಗ ಕಾರ್ಯಕ್ರಮ: ಅರ್ಜಿ ಅವಧಿ ವಿಸ್ತರಣೆ
ಮಂಗಳೂರು, ಮಾರ್ಚ್ 17, 2021: ಪ್ರಸ್ತುತ ಸಾಲಿನಲ್ಲಿ ಗ್ರಾಮೀಣ ಭಾಗದ ಪರಿಶಿಷ್ಟ ಪಂಗಡವರಿಗಾಗಿ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ, ಕುರಿ ಅಥವಾ ಮೇಕೆ ಘಟಕ ಸೌಲಭ್ಯ” ಪಡೆಯಲು ಅರ್ಜಿಯನ್ನು ಸಂಬಂಧಪಟ್ಟ ತಾಲೂಕಿನ ಸಹಾಯಕ ನಿರ್ದೇಶಕರು, (ಗ್ರೇಡ್-1&2) ಸಮಾಜ ಕಲ್ಯಾಣ ಇಲಾಖೆ, ಇವರಿಂದ ಪಡೆದು, ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಯವರ ಕಛೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ದ.ಕ ಜಿಲ್ಲೆ ಅಬ್ಬಕ್ಕ ನಗರ, ಮಂಗಳೂರು-575006, ದೂ.ಸಂಖ್ಯೆ :0824-2451269 ಹಾಗೂ [email protected] ನ್ನು ಸಂಪರ್ಕಿಸಲು ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.