ಕಂಬಳವನ್ನು ಉತ್ತೇಜಿಸಿ ಪ್ರೋತ್ಸಾಹಿಸಲು ₹ 1 ಕೋಟಿ ಸಹಾಯಧನ ಬಿಡುಗಡೆಗೊಳಿಸಿದ ಸರಕಾರ

 ಕಂಬಳವನ್ನು ಉತ್ತೇಜಿಸಿ ಪ್ರೋತ್ಸಾಹಿಸಲು ₹ 1 ಕೋಟಿ ಸಹಾಯಧನ ಬಿಡುಗಡೆಗೊಳಿಸಿದ ಸರಕಾರ
Share this post

ಕರಾವಳಿಯ ಜಾನಪದ ಕ್ರೀಡೆಯಾದ ಪ್ರತಿ ಕಂಬಳಕ್ಕೆ ರೂ.5 ಲಕ್ಷ ಸಹಾಯಧನ ನೀಡಲು ಸರ್ಕಾರ ಆದೇಶ

ಮಂಗಳೂರು, ಮಾರ್ಚ್ 18, 2021: ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ತೀರ್ಮಾನಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕರಾವಳಿಯ ಜಾನಪದ ಕ್ರೀಡೆಯಾದ ಪ್ರತಿ ಕಂಬಳಕ್ಕೆ ರೂ.5 ಲಕ್ಷ ಸಹಾಯಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ.5 ಲಕ್ಷಗಳಂತೆ ರೂ.50 ಲಕ್ಷ ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ.5 ಲಕ್ಷಗಳಂತೆ ರೂ.100 ಲಕ್ಷಗಳನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕಂಬಳಗಳಿಗೆ ಸಹಾಯಧನ ನೀಡಲಾಗುವುದು.

ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಶ್ರೀ ಸಿ.ಪಿ. ಯೋಗೇಶ್ವರ ರವರು ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ ರೂ.5 ಲಕ್ಷಗಳ ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಹೊರಡಿಸಿದೆ.

Subscribe to our newsletter!

Other related posts

error: Content is protected !!