ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಿಲ್ಲೆ ಪ್ರಥಮ ಸ್ಥಾನ ಬರಲಿ: ಜಿ. ಜಗದೀಶ್

 ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಿಲ್ಲೆ ಪ್ರಥಮ ಸ್ಥಾನ ಬರಲಿ: ಜಿ. ಜಗದೀಶ್
Share this post

ಉಡುಪಿ, ಮಾರ್ಚ್ 19, 2021: ಉಡುಪಿ ಜಿಲ್ಲೆ ಶಿಕ್ಷಣದಲ್ಲಿ ಯಾವಾಗಲೂ ನಂ 1 ಆಗಿರಬೇಕು.ಈ ವರ್ಷ ವಿದ್ಯಾರ್ಥಿಗಳು ಇನ್ನೂ ಹೆಚ್ಚು ಅಂಕ ಗಳಿಸಿ, ಈ ಬಾರಿಯೂ ರಾಜ್ಯದಲ್ಲಿ ಮೊದಲನೇ ಸ್ಥಾನ ಗಳಿಸುವಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

ಜಿಲ್ಲೆಯ ಶಿಕ್ಷಕರ ಶ್ರಮದಿಂದ ಉಡುಪಿ ಜಿಲ್ಲೆ ಶಿಕ್ಷಣದಲ್ಲಿ ರಾಜ್ಯಕ್ಕೇ ಮಾದರಿ ಜಿಲ್ಲೆಯಾಗಿದೆ. ಉಪನ್ಯಾಸಕರು ಉತ್ತಮವಾಗಿ ಬೋಧಿಸಿ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಬರುವಲ್ಲಿ ಶ್ರಮ ವಹಿಸಿದ್ದಾರೆ ಎಂದ ಅವರು ಕೆಲವು ಕಾಲೇಜುಗಳಲ್ಲಿ ಶೇಕಡಾ 90 ಹಾಗೂ ಶೇಕಡಾ 100 ಫಲಿತಾಂಶ ಬಂದಿದೆ. ಈ ಫಲಿತಾಂಶದ ಸಾಧನೆಯಿಂದ ಜಿಲ್ಲೆ ನಂ 1 ಬರಲು ಸಾಧ್ಯವಾಯಿತು.

90% ವಿಧ್ಯಾರ್ಥಿಗಳು ಈಗಾಗಲೇ ಕಾಲೇಜಿಗೆ ಹಾಜರಾಗಿದ್ದು , ಹಾಜರಾಗದ 10% ವಿಧ್ಯಾರ್ಥಿಗಳ ಸಮಸ್ಯೆಯನ್ನು ಗಮನ ಹರಿಸಿ ಅವರಿಗೆ ಪ್ರೋತ್ಸಾಹ ಹಾಗೂ ನೆರವುವನ್ನು ನೀಡಬೇಕು. ಕಾಲೇಜಿಗೆ
ಬರದೇ ಇರುವ ವಿದ್ಯಾರ್ಥಿಗಳ ಮನೆಗೆ ಹೋಗಿ ಪೋಷಕರಿಗೆ ಮಾಹಿತಿ ನೀಡಬೇಕು .

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಭಗವಂತ ಕಟ್ಟಿಮನಿ ಮಾತನಾಡಿ, ದ್ವೀತಿಯ ಪಿ.ಯು.ಸಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಗೊಂಡಿದ್ದು, ಪರೀಕ್ಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ಮಾಡಬೇಕು. ಜಿಲ್ಲೆಯಲ್ಲಿಒಟ್ಟು 105 ಕಾಲೇಜುಗಳಿದ್ದು, ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳಲ್ಲಿ ಉತ್ತಮ ಫಲಿತಾಂಶ ಬರುವ ಬಗ್ಗೆ
ಗಮನವಹಿಸಬೇಕು ಎಂದರು.

ಈ ಬಾರಿ 3394 ವಿದ್ಯಾರ್ಥಿನಿಯರು ಹಾಗೂ 7253 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ 14647 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಮಾಡಿ ಪೂರ್ವ ಸಿದ್ಧತೆಯನ್ನು ಮಾಡಬೇಕು.

ಕೆಲವೊಂದು ಕೌಟುಂಬಿಕ ವಿಚಾರಗಳಿಂದ ವಿದ್ಯಾರ್ಥಿಗಳನ್ನು ದತ್ತುಸ್ವಿಕಾರದಡಿಯಲ್ಲಿ ವಿದ್ಯಾರ್ಥಿಗಳಿಗೆ ಮೂಲಸೌಲಭ್ಯಗಳನ್ನು ಕೊಟ್ಟು ಅಂತಹ ವಿದ್ಯಾರ್ಥಿಗಳಿಗೆ ಸಹಕರಿಸಿ ಜಿಲ್ಲೆಗೆ ಉತ್ತಮ ಫಲಿತಾಂಶ ಬರುವಲ್ಲಿ ಶ್ರಮವಹಿಸಬೇಕು ಎಂದರು.

Subscribe to our newsletter!

Other related posts

error: Content is protected !!