ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶ: ಅರ್ಜಿ ಆಹ್ವಾನ
ಮಂಗಳೂರು, ಮಾರ್ಚ್ 20. 2021: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ 6 ರಿಂದ 10ನೇ ತರಗತಿಗಳಿಗೆ ಹೊಸದಾಗಿ ಸೇರ್ಪಡೆಗೊಳಿಸಲು ಪ.ಜಾತಿಯ ವಿದ್ಯಾರ್ಥಿಗಳಿಂದ ಆನ್ಲೈನ್ನಲ್ಲಿ ವೆಬ್ಸೈಟ್ www://admissions.kar.nic.in/hosteladmission ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೆಶಕರು, ಸಮಾಜ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ರಸಿಕ್ ಚೇಂಬರ್ಸ್, 3ನೇ ಮಹಡಿ, ಮಾರ್ಕೆಟ್ ರೋಡ್, ಮಂಗಳೂರು ದೂ. ಸಂಖ್ಯೆ: 0824-2423619/2441269 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್ 1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ