ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನ: ಅರ್ಜಿ ಅವಧಿ ವಿಸ್ತರಣೆ
ಮಂಗಳೂರು, ಮಾರ್ಚ್ 20, 2021: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಪ್ರಸ್ತುತ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶೀಷ್ಯ ವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಎಪ್ರಿಲ್ 20ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಅಧಿಕಾರಿಯವರ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆನೆಗುಂಡಿ ರಸ್ತೆ ಬಿಜೈ-ಕಾಪಿಕಾಡ್, ಮಂಗಳೂರು-4 ದೂ.ಸಂಖ್ಯೆ:0824-2225078 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.