ಕಾಪು ಮಾರಿ ಪೂಜೆ: ಮದ್ಯ ಮರಾಟ ನಿಷೇಧ
ಉಡುಪಿ, ಮಾರ್ಚ್ 23, 2021: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಾಪು ಮೂರು ಮಾರಿಗುಡಿಗಳಲ್ಲಿ ಮಾರ್ಚ್ 23 ಮತ್ತು 24 ರಂದು ಸುಗ್ಗಿ ಮಾರಿ ಪೂಜೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಲಿದ್ದಾರೆ.
ಹೀಗಾಗಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ , ಕಾಪು ಠಾಣಾ ವ್ಯಾಪ್ತಿಯ ಕಾಪು ಪಡು, ಮೂಳೂರು, ಮಜೂರು ಗ್ರಾಮಗಳ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ಶಾಪ್ಗಳ ಮದ್ಯ ಮಾರಾಟವನ್ನು ಮಾರ್ಚ್ 23 ರ ಬೆಳಗ್ಗೆ 6 ರಿಂದ ಮಾರ್ಚ್ 24 ರ ರಾತ್ರಿ 12 ಗಂಟೆಯವರೆಗೆ ಮುಚ್ಚಲು ಆದೇಶಿಸಿ, ಈ ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.