ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು, ಮಾರ್ಚ್ 23, 2021: ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಜಿಲ್ಲಾ ಕೋಶದಲ್ಲಿ ಒಂದು ಕಾರ್ಯಕ್ರಮ ಸಹಾಯಕರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾಚ್ 31 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಕೊಟ್ಟಾರ-ಮಂಗಳೂರು, ದೂರವಾಣಿ ಸಂಖ್ಯೆ: 0824-2451254 ಅಥವಾ ಇಮೇಲ್: [email protected] ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.