ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ
ಕಾರವಾರ ಮಾ. 23, 2021: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2021ರ ಮೆ. 5 ರಿಂದ 2022ರ ಫೆ. 28 ರವರೆಗೆ 10 ತಿಂಗಳ ತೋಟಗಾರಿಕೆ ತರಬೇತಿ ಆಯೋಜಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಕಾರವಾರ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೋಟಗಾರಿಕೆ ಪ್ರಾಯೋಗಿಕ ತರಬೇತಿ ಯೋಜನೆಯಡಿ 2021-22ನೇ ಸಾಲಿನಲ್ಲಿ ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಗೆ ಈ ತರಬೇತಿ ಆಯೋಜಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ತರಬೇತಿ ಬಯಸುವ ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಕಡ್ಡಾಯವಾಗಿ ಪಹಣಿಯನ್ನು ನೀಡಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗೆ ಕನಿಷ್ಠ ವಯೋಮಿತಿ 18 ಹಾಗೂ ಗರಿಷ್ಠ 30 ವರ್ಷ, ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಹಾಗೂ ಗರಿಷ್ಠ 33 ವರ್ಷ ಆಗಿರಬೇಕು. ಅಭ್ಯರ್ಥಿಯು ತರಬೇತಿ ಕೇಂದ್ರದಲ್ಲಿಯೇ ಇರಬೇಕು.
ಅರ್ಜಿ ನಿಗದಿತ ಪ್ರವೇಶ ಪತ್ರಗಳನ್ನು ಮಾ. 24 ರಿಂದ ಏ. 17 ರವರೆಗೆ ಸಿದ್ದಾಪುರದ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಅಥವಾ ಇಲಾಖೆಯ ವೆಬ್‍ಸೈಟ್: www.horticulturedir.karnataka.gov.in ನಲ್ಲಿ ಪಡೆದುಕೊಳ್ಳಬಹುದು.
ಸಾಮಾನ್ಯ ವರ್ಗದವರು 30 ರೂ, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರು 15 ರೂ ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ (IPO)ನ್ನು ತೋಟಗಾರಿಕೆ ಉಪ ನಿರ್ದೇಶಕರು(ಜಿ.ಪಂ) ಶಿರಸಿ [Deputy Director of Horticulture (ZP) SIRSI] ರವರ ಹೆಸರಿನಲ್ಲಿ ಪಡೆದು ಅರ್ಜಿ ಜೊತೆಗೆ ಪೂರ್ಣ ಮಾಹಿತಿಗಳನ್ನು ತುಂಬಿ ಅರ್ಹತಾ ಪತ್ರಗಳೊಂದಿಗೆ(ಎಸ್.ಎಸ್.ಎಲ್.ಸಿ) ಪ್ರಮಾಣ ಪತ್ರದ ಅಂಕ ಪಟ್ಟಿ, ಲಿವ್ಹಿಂಗ್ ಸರ್ಟಿಪಿಕೆಟ್, ಜಾತಿ ಪ್ರಮಾಣ ಪತ್ರ, ಸ್ವಂತ ಜಮೀನಿನ ಉತಾರ, ಹಿಡುವಳಿ ದೃಢೀಕರಣ ಪತ್ರದ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಏ. 17ರ ರೊಳಗಾಗಿ ಸಿದ್ದಾಪುರದ ಸಹಾಯಕ ತೋಟಗಾರಿಕೆ ನಿರ್ದೇಶಕರಿಗೆ ಸಲ್ಲಿಸಬಹುದು.
ಅಲ್ಲದೇ ಶಿರಸಿಯ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರ ಕಛೇರಿಯಲ್ಲಿ ಏ. 20ರಂದು ಬೆಳಿಗ್ಗೆ 11ಕ್ಕೆ ಜರುಗುವ ಸಂದರ್ಶನಕ್ಕೆ ಎಲ್ಲಾ ಅಭ್ಯರ್ಥಿಗಳು ನೇರವಾಗಿ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬಹುದು. ಈ ಸಂಬಂಧ ಕಛೇರಿಯಿಂದ ಯಾವುದೇ ಪತ್ರ ವ್ಯವಹಾರ ಮಾಡಲಾಗುವುದಿಲ್ಲ.
ಮೇ. 3ರಂದು ಪ್ರಾರಂಭವಾಗುವ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೋವಿಡ್-19 ಪರೀಕ್ಷ ವರದಿಯೊಂದಿಗೆ(-ve ಇದ್ದಲ್ಲಿ ಮಾತ್ರ) ಹಾಜರಾಗಬೇಕು. ಹಾಗೂ ಸಂಬಂಧಿಸಿದ ಎಲ್ಲ ನಿಯಮಗಳನ್ನು ಪಾಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ), ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿ.ಪಂ) ಕಛೇರಿ ಅಥವಾ ದೂರವಾಣಿ ಸಂಖ್ಯೆ: 08389-298032ಕ್ಕೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.