ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

 ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ
Share this post

ಮಂಗಳೂರು, ಮಾರ್ಚ್ 23, 2021: ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ಕಾರ್ಯಕ್ರಮವನ್ನು ಪ್ರಸ್ತುತ ವರ್ಷದ ಮೇ 3 ರಿಂದ 2022ನೇ ಸಾಲಿನ ಫೆಬ್ರವರಿ 28 ರವರೆಗೆ  ಹಮ್ಮಿಕೊಳ್ಳಲಾಗುವುದು.

ತರಬೇತಿಯನ್ನು ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕಿನ ಬಿಜುವಳ್ಳಿ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುವುದು.

ಅರ್ಜಿ ಸಲ್ಲಿಸಲು ಏಪ್ರಿಲ್ 17 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in ನಿಂದ  ಪಡೆದು ಭರ್ತಿ ಮಾಡಿ ಸಲ್ಲಿಸಬೇಕು  ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯ ವಲಯ, ಮಂಗಳೂರು ಕಛೇರಿಯನ್ನು ಸಂರ್ಪಕಿಸಬಹುದು ದೂ. ಸಂಖ್ಯೆ :0824-2444298 ನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!