ಸೇಕ್ರೆಡ್ ಹಾರ್ಟ್ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ
ಮಡಂತ್ಯಾರ್ ಮಾರ್ಚ್ 24, 2021: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಒಂದು ದಿನದ ಜೀವನ ಕೌಶಲ್ಯ ಕಾರ್ಯಾಗಾರವು ಇಂದು ನಡೆಯಿತು.
ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಸ್ನಾತಕೋತ್ತರ ವಾಣಿಜ್ಯ ವಿಭಾಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ಇದರ ಸಹಭಾಗಿತ್ವದೊಂದಿಗೆ ಈ ಕಾರ್ಯಕ್ರಮವು ಆಯೋಜಿಸಲ್ಪಟ್ಟಿತು.
ಒಂದು ನಿರ್ದಿಷ್ಟ ಚೌಕಟ್ಟಿನೊಳಗೆ ನಿಂತು ಯೋಚಿಸಿದರೆ ಯಾವ ಸಮಸ್ಯೆಗೂ ಪರಿಹಾರ ಸಿಗದು ಆದರೆ ಆ ಚೌಕಟ್ಟಿನಿಂದ ಹೊರಬಂದು ಯೋಚಿಸುವಾಗ ಸಮಸ್ಯೆ ಬಗೆ ಹರಿಯುವುದು ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ಜೋಸೆಫ್ ಎನ್ ಎಂ ಹೇಳಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಉಪನ್ಯಾಸಕರಾದ ಸಂತೋಷ್ ಪ್ರಭು, ಜೀವನ ಕೌಶಲ್ಯ ತರಬೇತುದಾರರಾದ ಶ್ರೀ ಶಾಂತಪ್ಪ ಮತ್ತು ಶ್ರೀಕಾಂತ್ ಪೂಜಾರಿ ಆಗಮಿಸಿದರು. ವಿದ್ಯಾರ್ಥಿಗಳಿಗೆ ಅನೇಕ ಚಟುವಟಿಕೆ ನಡೆಸಿ,ಕೌಶಲ್ಯಗಳ ಬಗ್ಗೆ ತರಬೇತಿ ನೀಡುವುದರ ಜತೆಗೆ ಯುವ ಸಬಲೀಕರಣದ ಬಗ್ಗೆ ಜಾಗೃತಿ ಮೂಡಿಸಿದರು.
ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಪಾವನ ರೈ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಾಗಾರಕ್ಕೆ ಆಗಮಿಸಿದ ಎಲ್ಲರನ್ನೂ ಪಿಜಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಜೊವಿಟ ಸ್ವಾಗತಿಸಿದರು. ನಿರೀಕ್ಷಾ,ರಶ್ಮಿತಾ ಮತ್ತು ಅನುಶ್ರೀ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಡೆಲಿಟ ಮತ್ತು ಪ್ರಿಯ ಮ್ಯಾಥ್ಯೂ ಧನ್ಯವಾದ ಅರ್ಪಿಸಿದರು. ಶರತ್ ಕಾರ್ಯಕ್ರಮ ನಿರೂಪಿಸಿದರು.
ಶ್ರೇಯಸ್ ಅಂತರ
ಫೈನಲ್ ಎಂ ಕಾಮ್
ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರ್