ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ: ಅರ್ಜಿ ಆಹ್ವಾನ

 ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ: ಅರ್ಜಿ ಆಹ್ವಾನ
Share this post

ಉಡುಪಿ, ಮಾರ್ಚ್ 24, 2021: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುದಾನದಲ್ಲಿ, ಜಿಲ್ಲಾ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಸಲಹೆಗಾರ/ಸಮಾಜ ಸೇವಕರ (ಎಮ್.ಎಸ್.ಡಬ್ಲ್ಯೂ) -2 ಹುದ್ದೆ ಹಾಗೂ ಕಛೇರಿ ಸೇವಕರ (ಎಸ್.ಎಸ್.ಎಲ್.ಸಿ)  – 1 ಹುದ್ದೆಗೆ ಗೌರವಧನದ ಆಧಾರದಲ್ಲಿ ಕಾರ್ಯ ನಿರ್ವಹಿಸಲು ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 3 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷರು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ಕೃಷ್ಣ ಕೃಪಾ ಕಂಪೌಂಡ್, ಉಡುಪಿ, ದೂ. ಸಂಖ್ಯೆ: 0820-2526394, ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!