ಮತದಾನ/ಮತದಾನ ಎಣಿಕೆ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

 ಮತದಾನ/ಮತದಾನ ಎಣಿಕೆ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
Share this post

ಮಂಗಳೂರು, ಮಾರ್ಚ್ 25, 2021: ಗ್ರಾಮ ಪಂಚಾಯತ್‍ಗಳ ಸಾರ್ವತ್ರಿಕ ಚುನಾವಣೆ-2021 ಕ್ಕೆ ಸಂಬಂಧಿಸಿದಂತೆ,  ದಕ್ಷಿಣ ಕನ್ನಡ ಜಿಲ್ಲೆಯ ಮತದಾನ/ಮತದಾನ ಎಣಿಕೆ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ವೇಣೂರು, ಆರಂಬೋಡಿ, ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾಗೂ ಬಂಟ್ವಾಳ ತಾಲೂಕಿನ ಮಾಣಿಲ, ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾರ್ಚ್ 27 ರಂದು ಸಂಜೆ 5 ಗಂಟೆಯಿಂದ ಮಾರ್ಚ್ 29 ರಂದು ಸಂಜೆ 6 ಗಂಟೆಯವರೆಗೆ ಮತ್ತು ಮತ ಎಣಿಕೆ ಸಲುವಾಗಿ ಮಾರ್ಚ್ 30 ರಂದು ಮಧ್ಯರಾತ್ರಿ 12 ಗಂಟೆಯಿಂದ ಮಾರ್ಚ್ 31 ರಂದು ಮದ್ಯರಾತ್ರಿ 12 ಗಂಟೆಯವರೆಗೆ ಸಾರ್ವತ್ರಿಕ ಚುನಾವಣೆ ನಡೆಯುವ ಮತದಾನ/ಮತದಾನ ಎಣಿಕೆ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆಯನ್ನು ವಿಧಿಸಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ಪ್ರದತ್ತವಾದ ಅಧಿಕಾರದಂತೆ  ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮತದಾನ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ಈ ಅವಧಿಯಲ್ಲಿ ಮತದಾನದ ಉದ್ದೇಶದಿಂದ ಮತದಾನಕ್ಕೆ ಬರುವ ಮತದಾರರನ್ನು ಹೊರತುಪಡಿಸಿ ಇತರೇ ವ್ಯಕ್ತಿಗಳು ಸಕಾರಣವಿಲ್ಲದೇ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುಬಾರದು.

ಯಾವುದೇ ಆಯುಧ, ಕುಡುಗೋಲು, ಖಡ್ಗ, ಚೂರಿ,ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ.  

ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೇಷ್ಠಮಾಡುವುದು, ಸನ್ನೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಪ್ರಸಾರ ಮಾಡುವುದು, ಪ್ರಕಟನಾ ಪತ್ರಿಕೆಗಳ ಅಥವಾ ಇತರೆ ಯಾವುದೇ ವಸ್ತುಗಳ ಪ್ರದರ್ಶನ , ಭಿತ್ತಿಪತ್ರಗಳನ್ನು ಅಂಟಿಸಬಾರದು.

ಈ ಆದೇಶವು ಸರ್ಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಮತ್ತು ಆರಕ್ಷಕ ಸಿಬ್ಬಂದಿಗಳು ಕಾರ್ಯನಿರ್ವಹಣೆ ವೇಳೆ ಲಾಠಿಗಳನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ ಹಾಗೂ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಸಿಬ್ಬಂಧಿಗಳು ಅವರ ಚುನಾವಣಾ ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯಿಸುವುದಿಲ್ಲ.

Subscribe to our newsletter!

Other related posts

error: Content is protected !!