ಕೋವಿಡ್-19 ನಿಯಮಾವಳಿ ಪಾಲಿಸುವಂತೆ ಜಿಲ್ಲಾಧಿಕಾರಿ ಆದೇಶ
ಕಾರವಾರ, ಮಾರ್ಚ್. 26, 2021: :ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿನ ಕೋವಿಡ್-19 ಪ್ರಕರಣಗಳು ವರದಿಯಾಗಿರುವ ಹಿನ್ನಲೆಯಲ್ಲಿ, ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸರ್ಕಾರಸುತ್ತೋಲೆ ಹೊರಡಿಸಿಸಿದೆ.
ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆ ತೀವ್ರವಾಗಿ ಹರಡದಂತೆ ತಡೆಗಟ್ಟಲು ಸರಕಾರ ಸೂಚಿಸಿರುವ ಕೊವಿಡ್-19 ನಿಯಮಾವಳಿಗಳನ್ನು ಅಧಿಕಾರಿಗಳು ಹಾಗೂ ಸಾರ್ವಜನಿಕರುಕಟ್ಟುನಿಟ್ಟಾಗಿ ಪಾಲುಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಅಂತರ ರಾಜ್ಯಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆದು ಕೇರಳ ಮತ್ತು ಮಹಾರಾಷ್ಟ್ರ ದಿಂದ ಜಿಲ್ಲೆಗೆ ಆಗಮಿಸುವ ಜನರನ್ನುಕಟ್ಟು ನಿಟ್ಟಾಗಿ ತಪಾಸಣೆಗೆ ಒಳಪಡಿಸಲು ಸೂಚಿಸಿದ್ದಾರೆ.
ಕೋವಿಡ್ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದು, ದೈಹಿಕ ಅಂತರ ಪಾಲಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಅದನ್ನುಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕೋವಿಡ್ ಲಸಿಕೆ ಪಡೆದುಕೊಳ್ಳುವುದು ಹಾಗೂ ಕೋವಿಡ್ ಪರೀಕ್ಷೆಗೆ ಒಳಪಡುವುದು, ಇತ್ಯಾದಿಗಳ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುವುದು ಈ ಮೂಲಕ ಸಾರ್ವಜನಿಕರಲ್ಲಿಅರಿವು ಮೂಡಿಸುವಕಾರ್ಯ ಮಾಡಬೇಕೆಂದು ಅಧಿಕಾರಿಗಳಿಗಳಿಗೆ ಸೂಚನೆ ನೀಡಿದ್ದಾರೆ.
ವಿವಿಧ ಸಮಾರಂಭಗಳು ಹಾಗೂ ಅಚರಣೆಗಳ ಸಂದರ್ಭದಲ್ಲಿ ಹೆಚ್ಚು ಸಾರ್ವಜನಿಕರು ಗುಂಪು ಸೇರುವ ಹಿನ್ನೆಲೆಯಲ್ಲಿ ಸೋಂಕು ಹರಡುವ ಅಪಾಯವು ಹೆಚ್ಚಿರುತ್ತದೆ. ಆದ್ದರಿಂದ ವಿವಿಧ ಸಂದರ್ಭಗಳಲ್ಲಿ ಈ ಕೆಳಗೆ ಸೂಚಿಸಿದ ಸಂಖ್ಯೆಯನ್ನು ಮೀರದಂತೆ ಸಾರ್ವಜನಿಕರಿಗೆ ಅವಕಾಶ ನೀಡಬೇಕು.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ 3.25 sq.meter per ಎಂಬ ಮಾನದಂಡವನ್ನು ಪಾಲಿಸಬೇಕು.
ಮದುವೆಗೆ ತೆರೆದ ಪ್ರದೇಶಗಳಲ್ಲಿ 500 ಜನ, ಸಭಾಂಗಣ/ಹಾಲ್‍ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 200ಜನ, ಜನ್ಮದಿನಹಾಗೂಇತರೆ ಆಚರಣೆಗಳಿಗೆ ತೆರೆದ ಪ್ರದೇಶಗಳಲ್ಲಿ 100ಜನ,
ಸಭಾಂಗಣ/ಹಾಲ್ ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 50ಜನ, ನಿಧನ/ಶವಸಂಸ್ಕಾರಕ್ಕೆ
ತೆರೆದ ಪ್ರದೇಶಗಳಲ್ಲಿ 100 ಜನ, ಸಭಾಂಗಣ/ಹಾಲ್ ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 50ಜನ, ಅಂತ್ಯಕ್ರೀಯೆಗೆ 50 ಜನ, ಧಾರ್ಮಿಕ ಆಚರಣೆಗಳ ಸಮಾರಂಭಗಳಿಗೆ ತೆರೆದ ಪ್ರದೇಶಗಳಲ್ಲಿ 500 ಜನ, ರಾಜಕೀಯ ಆಚರಣೆಗಳು/ ಸಮಾರಂಭಗಳಿಗೆ ತೆರೆದ ಪ್ರದೇಶಗಳಲ್ಲಿ 500 ಜನರನ್ನು ಮಾತ್ರ ಸೇರಿಸಲು ಅವಕಾಶ ನೀಡಲಾಗಿದೆಎಂದುಅವರು ತಿಳಿಸಿರುತ್ತಾರೆ.
ಜೊತೆಗೆ ಸಂಪರ್ಕ ಪತ್ತೆ ಹಚ್ಚುವಿಕೆ, ಹೋಮ್‍ಕ್ವಾರೆಂಟೈನ್, ಹೋಮ್‍ಐಸೋಲೆಷನ್, ಕೋವಿಡ್ ಪರೀಕ್ಷೆ ಮುಂತಾದುವುಗಳನ್ನು ಪರಿಣಾಮಕಾರಿಯಾಗಿ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಒಂದು ವೇಳೆ ಸೋಂಕಿನ ಪ್ರಕರಣಗಳು ಹೆಚ್ಚಾದಲ್ಲಿ ಅವರಿಗೆ ಚಿಕಿತ್ಸೆ ಒದಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳಲಾಗುವುದು.
ಸರ್ಕಾರದ ಉಲ್ಲೇಖಿತ ಸುತ್ತೋಲೆಯಲ್ಲಿನ ಎಲ್ಲ ಕ್ರಮಗಳನ್ನು ಹಾಗೂ ಕಾಲಕಾಲಕ್ಕೆ ಸರ್ಕಾರದಿಂದ ನೀಡಲಾಗುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೈಗೊಂಡ ಕ್ರಮಗಳ ಕುರಿತುಜಿಲ್ಲಾಡಳಿತ ಕಾರ್ಯಾಲಯಕ್ಕೆ ಕಾಲಕಾಲಕ್ಕೆ ವರದಿ ಸಲ್ಲಿಸಬೇಕುಎಂದಿದಾರೆ.
ಈ ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ದ ವಿಪತ್ತು ನಿರ್ವಹಣಾಕಾಯ್ದೆ 2005, ಸಾಂಕ್ರಾಮಿಕ ರೋಗ ಕಾಯ್ದೆ 1897 ಮತ್ತು ಭಾರತೀಯ ದಂಡ ಸಂಹಿತೆ 188 ರಡಿ ಶಿಕ್ಷೆಗೆ ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.