ಮಂಗಳೂರು: ಬೃಹತ್ ಲೋಕ್ ಅದಾಲತ್
ಮಂಗಳೂರು, ಮಾರ್ಚ್ 26, 2021: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿನ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ್ 27 ರಂದು ಬೃಹತ್ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ನ್ಯಾಯಾಲಯಗಳಲ್ಲಿ ತೀರ್ಮಾನಕ್ಕೆ ಬಾಕಿ ಇರುವ ಮತ್ತು ವ್ಯಾಜ್ಯ ಪೂರ್ವ ಎಲ್ಲಾ ಸಿವಿಲ್ ಸ್ವರೂಪದ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಕಾಯ್ದೆ ಅಡಿ ಪರಿಹಾರಕ್ಕಾಗಿ ಸಲ್ಲಿಸಲಾದ ಅರ್ಜಿಗಳು, ಭೂಸ್ವಾಧೀನ ಪರಿಹಾರಕ್ಕೆ ಸಂಬಂಧಿಸಿದ ಪ್ರಕರಣಗಳು ಇತ್ಯಾದಿಗಳನ್ನು ಅಂದು ಲೋಕ್ ಅದಾಲತ್ ಮುಖಾಂತರ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ.
ಸಾರ್ವಜನಿಕರು ನೇರವಾಗಿ ಅಥವಾ ತಮ್ಮ ವಕೀಲರ ಮೂಲಕ ಲೋಕ್ ಅದಾಲತ್ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು.
ಪಕ್ಷಕಾರರು ಲೋಕ್ ಅದಾಲತ್‍ನಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ಅವರು ನ್ಯಾಯಾಲಯಕ್ಕೆ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ವಾಪಾಸ್ಸು ಪಡೆಯಲು ಅರ್ಹರಾಗಿರುತ್ತಾರೆ.
ಹಾಗೆಯೇ ವ್ಯಾಜ್ಯ ಪೂರ್ವ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವುದೇ ನ್ಯಾಯಾಲಯ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯ ಸಂಕೀರ್ಣ, ಕೋಡಿಯಾಲ್‍ಬೈಲ್, ಮಂಗಳೂರು ದೂ. ಸಂ.- 0824-2448111, ಮೊ. ಸಂ.- 9480024188 ನ್ನು ಸಂಪರ್ಕಿಸಬಹುದು.