ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು: ಮಮತಾ ರಾವ್

 ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು: ಮಮತಾ ರಾವ್
Share this post

ಧರ್ಮಸ್ಥಳ, ಮಾರ್ಚ್ 26, 2021: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ನಿರ್ದೇಶಕಿ ಮಮತಾ ರಾವ್ ಹೇಳಿದರು.

ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅವರು ತೆಂಗಿನ ಸಿಪ್ಪೆಯಿಂದ ಕುಂಡಗಳನ್ನು ತಯಾರಿಸಿ ಅದರಲ್ಲಿ ಹೂವಿನ ಗಿಡಗಳನ್ನು ನೆಟ್ಟು ಬೇರೆ ಗಿಡಗಳಿಗೆ ತೂಗು ಹಾಕುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸುತ್ತಮುತ್ತಲಿನ ಪ್ರಶಾಂತ ಪ್ರಕೃತಿ-ಪರಿಸರವನ್ನು ಪ್ರೀತಿಸಿ ಟಿ.ವಿ. ಹಾಗೂ ಸಂಚಾರಿ ದೂರವಾಣಿಯನ್ನು ಮಿತವಾಗಿ ಬಳಸಿ ಎಂದು ಅವರು ಸಲಹೆ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳಾ, ಎಂ.ವಿ. ಶುಭಾಶಂಸನೆ ಮಾಡಿದರು.

Subscribe to our newsletter!

Other related posts

error: Content is protected !!