ಗ್ರಾಮ ಪಂಚಾಯತ್ ಚುನಾವಣೆ: ಮದ್ಯ ಮಾರಾಟ ನಿಷೇಧ

 ಗ್ರಾಮ ಪಂಚಾಯತ್ ಚುನಾವಣೆ: ಮದ್ಯ ಮಾರಾಟ ನಿಷೇಧ
Share this post

ಮಂಗಳೂರು, ಮಾರ್ಚ್ 27, 2021: ಗ್ರಾಮ ಪಂಚಾಯಿತಿಗಳಿಗೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ/ ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ಮುಂಜಾಗೃತಾ ಕ್ರಮವನ್ನು ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ, ಮತದಾನವು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತದಿಂದ ಕೂಡಿದ ಶಾಂತಿಯುತ ವಾತಾವರಣದಲ್ಲಿ ನಡೆಯುವುದನ್ನು ಖಾತರಿಪಡಿಸುವ ದೃಷ್ಠ್ಠಿಯಿಂದ ಕರ್ನಾಟಕ ಅಬಕಾರಿ ಸನ್ನದ್ದುಗಳ (ಸಾಮಾನ್ಯ ಷರತ್ತುಗಳು) ನಿಯಮ 1967ರ ನಿಯಮ 10-ಬಿ ಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಮದ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ,  ಮಾರಾಟ ಕೇಂದ್ರಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು, ಆರಂಬೋಡಿ, ತಣ್ಣೀರುಪಂತ ಗ್ರಾಮ ಪಂಚಾಯತ್‍ಗಳಲ್ಲಿ ಹಾಗೂ ಬಂಟ್ವಾಳ ತಾಲೂಕಿನ ಮಾಣಿಲ, ಪುದು ಗ್ರಾಮ ಪಂಚಾಯತ್‍ಗಳಲ್ಲಿ ಮತದಾನದ ಸಲುವಾಗಿ ಮಾರ್ಚ್ 27 ರಂದು ಸಂಜೆ 5 ಗಂಟೆಯಿಂದ 29 ರಂದು ಸಂಜೆ 5 ಗಂಟೆಯವರೆಗೆ ಹಾಗೂ ಮತ ಎಣಿಕೆ ಸಲುವಾಗಿ ಮಾರ್ಚ್ 31 ರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮತ ಎಣಿಕೆ ನಡೆಯುವ ಕೇಂದ್ರಗಳ 3 ಕಿ.ಮೀ. ವ್ಯಾಪ್ತಿಯನ್ನು ಮದ್ಯ ಮುಕ್ತ ದಿನಗಳೆಂದು (ಡ್ರೈಡೇಸ್) ಘೋಷಿಸಲಾಗಿದೆ.

ಈ ದಿನಗಳಲ್ಲಿ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ,  ಮಾರಾಟ ಕೇಂದ್ರಗಳನ್ನು ಮುಚ್ಚಲು ಆದೇಶಿಸಿರುತ್ತಾರೆ.

ಸೂಚಿತ ಅವಧಿಯಲ್ಲಿ ಯಾವುದೇ  ಹೊಟೇಲ್ ಗಳಲ್ಲಾಗಲೀ, ನಾನ್ ಪ್ರೋಪೈಟರ್‍ಗಳಲ್ಲಿ, ಸ್ಟಾರ್  ಹೊಟೇಲ್ ಗಳಲ್ಲಾಗಲೀ ಮದ್ಯ ಮಾರಾಟ ಅಥವಾ ಸರಬರಾಜು ಮಾಡುವುದನ್ನು ಕೂಡಾ ನಿಷೇಧಿಸಲು ಆದೇಶಿಸಲಾಗಿದೆ.

Subscribe to our newsletter!

Other related posts

error: Content is protected !!