ಧರ್ಮಸ್ಥಳ: ಕಣ್ಮನ ಸೆಳೆದ ರಾಷ್ಟ್ರೀಯ ನೃತ್ಯೋತ್ಸವ

 ಧರ್ಮಸ್ಥಳ: ಕಣ್ಮನ ಸೆಳೆದ ರಾಷ್ಟ್ರೀಯ ನೃತ್ಯೋತ್ಸವ
Share this post

ಧರ್ಮಸ್ಥಳ, ಮಾರ್ಚ್ 30, 2021: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿ ಆಶ್ರಯದಲ್ಲಿ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮವು ಧರ್ಮಸ್ಥಳದಲ್ಲಿ ಮಹೋತ್ಸವ ಸಭಾ ಭವನದಲ್ಲಿ ನಡೆಯಿತು.

“ಭಾರತೀಯ ಸಂಸ್ಕøತಿಯಲ್ಲಿ ನೃತ್ಯ ಕಲೆಗೆ ವಿಶೇಷ ಮಹತ್ವ ಇದೆ. ನೃತ್ಯ ಪಟುಗಳ ಸಾಧನೆಯನ್ನು ಜಾಗತಿಕ ಮಟ್ಟದಲ್ಲಿ ಪಸರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿ ಸೇವೆ ಶ್ಲಾಘನೀಯ,” ಎಂದು ನೃತ್ಯೋತ್ಸವ ಉದ್ಘಾಟಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಜರ್ಮನಿ, ಹೊಸಪೇಟೆ, ಮಡಿಕೇರಿ, ಹಾಸನ, ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಿಂದ ಬಂದ ನೂರು ಕಲಾವಿದರು ನೃತ್ಯ ಪ್ರದರ್ಶನ ನೀಡಿದರು.

ಸೂಕ್ತ ಅವಕಾಶ ಸಿಗದ ಗ್ರಾಮೀಣ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವುದೇ ರಾಷ್ಟ್ರೀಯ ಶಾಸ್ತ್ರೀಯ ನೃತ್ಯೋತ್ಸವದ ಉದ್ದೇಶವಾಗಿದೆ ಎಂದು ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿ ಕಾರ್ಯದರ್ಶಿ ಹಾಗೂ ಖ್ಯಾತ ನೃತ್ಯ ಕಲಾವಿದೆ ಡಾ. ಸ್ವಾತಿ ಪಿ. ಭಾರದ್ವಾಜ್ ತಿಳಿಸಿದ್ದಾರೆ.

ಶ್ರೀ ಮಂಜುನಾಥ ಸ್ವಾಮಿಗೆ ಸೇವಾ ರೂಪದಲ್ಲಿ ನೃತ್ಯ ಪ್ರದರ್ಶನ ನೀಡಿದ ಎಲ್ಲಾ ಕಲಾವಿದರಿಗೂ ಶ್ರೀ ಮಂಜುನಾಥ ಸ್ವಾಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿಯ ಅಧ್ಯಕ್ಷರಾದ ಕೆ.ಆರ್. ಅನಿತಾ ಮತ್ತು ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾದ ಪ್ರೇಕ್ಷಾ, ಬಿ.ಎ. ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!