ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

 ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ
Share this post

ಕಾರವಾರ, ಏಪ್ರಿಲ್ 03, 2021: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರುವತ್ತಿ, ಮದನೂರು ಮತ್ತು ಉಮ್ಮಚಗಿ ಹಾಗೂ ಮುಂಡಗೋಡ ತಾಲೂಕಿನ ಕೊಡಂಬಿ ಗ್ರಾಮ ಪಂಚಾಯತಗಳಲ್ಲಿನ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಅರ್ಜಿ ಸಲ್ಲಿಸಲು ಏ. 10 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸಬಯಸುವರು ಕನಿಷ್ಠ 10ನೇ ತರಗತಿ ಉತ್ತಿರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಕ್ರೀಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು ಮತ್ತು ಅದೇ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುವರಾಗಿರಬೇಕು. 45 ವರ್ಷ ದೊಳಗಿನವರಾಗಿದ್ದು, ಕಳೆದ 3 ವರ್ಷಗಳ ಅವಧಿಯಲ್ಲಿ ಕನಿಷ್ಠ 2 ವರ್ಷ ಯೋಜನೆಯಡಿ ಅಕುಶಲ ಕಾರ್ಮಿಕರಾಗಿ ಕೆಲಸ ನಿರ್ವಹಿಸಿರÀಬೇಕು.
ಮಾಸಿಕ ಗೌರವ ಧನ 6 ಸಾವಿರ ಹಾಗೂ ಕಾರ್ಯನಿರ್ವಹಣೆ ಆಧರಿಸಿ 5 ಸಾವಿರ ಪ್ರೋತ್ಸಾಹ ಧನವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಯಲ್ಲಾಪುರ ತಾಲೂಕಾ ಪಂಚಾಯತ (08419-261130) ಮುಂಡಗೋಡ ತಾಲೂಕಾ ಪಂಚಾಯತ (08301 -222124) ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿರುತ್ತದೆ.

Subscribe to our newsletter!

Other related posts

error: Content is protected !!