ಜಿಕೆವಿಕೆ ಆವರಣದಲ್ಲಿ ಶ್ರೀ ಧರ್ಮಸ್ಥಳ ಸಿರಿ ಮಾರಾಟ ಮಳಿಗೆ ಉದ್ಘಾಟನೆ

 ಜಿಕೆವಿಕೆ ಆವರಣದಲ್ಲಿ ಶ್ರೀ ಧರ್ಮಸ್ಥಳ ಸಿರಿ  ಮಾರಾಟ ಮಳಿಗೆ ಉದ್ಘಾಟನೆ
Share this post

ಧರ್ಮಸ್ಥಳ, ಏಪ್ರಿಲ್ 05, 2021: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ 15ನೇ ಮಾರಾಟ ಮಳಿಗೆ ಬೆಂಗಳೂರಿನ ಜಿಕೆವಿಕೆ ಕೃಷಿ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಇಂದು ಆರಂಭಗೊಂಡಿತು.

ಕೃಷಿ ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಡಾ|| ಎಸ್. ರಾಜೇಂದ್ರ ಪ್ರಸಾದ್ ಮತ್ತು ಅವರ ಧರ್ಮಪತ್ನಿ ಪದ್ಮಿನಿ ಆರ್. ಪ್ರಸಾದ್‍ ಮಳಿಗೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ|| ಡಿ.ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಹೇಮಾವತಿ ಅಮ್ಮನವರ ಸೇವೆಗಳನ್ನು ಶ್ಲಾಘಿಸಿ ಸಿರಿ ಉತ್ಪನ್ನಗಳ ಬೆಳವಣಿಗೆಗೆ ಸಂಪೂರ್ಣ ಸಹಕರಿಸುವುದಾಗಿ ತಿಳಿಸಿ ಶುಭ ಹಾರೈಸಿದರು.

ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ರಾಮಸ್ವಾಮಿ ಉಪಸ್ಥಿತರಿದ್ದರು. ವಿಶ್ವವಿದ್ಯಾನಿಲಯದ ಉನ್ನತ ಅಧಿಕಾರಿಗಳಾದ ಡಾ|| ಬಿ.ಎಲ್. ಚಿದಾನಂದ, ಡಾ|| ಸಿ.ಪಿ. ಗ್ರೇಸಿ, ಡಾ|| ವೈ.ಜಿ.ಷಡಕ್ಷರಿ, ಡಾ|| ಬೈರೇಗೌಡ, ಡಾ|| ಧನಪಾಲ್, ಡಾ|| ಗಂಗಪ್ಪ ಹಾಗೂ ಕೃಷಿ ವಿಶ್ವ ವಿದ್ಯಾನಿಲಯದ ಅಧಿಕಾರಿ ಕೃಷ್ಣಮೂರ್ತಿ ಮತ್ತು ಕೃಷಿ ವಿಶ್ವ ವಿದ್ಯಾನಿಲಯದ ಹಣಕಾಸು ನಿಯಂತ್ರಣಾಧಿಕಾರಿ ಡಾ|| ಸುರೇಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ಧನ್‍ ವಹಿಸಿದ್ದರು. ಮಳಿಗೆಗೆ ಕೃಷಿ ವಿಶ್ವ ವಿದ್ಯಾನಿಲಯದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭೇಟಿ ನೀಡಿ ಪ್ರೋತ್ಸಾಹಿಸಿದರು. ಸಂಸ್ಥೆಯ ಸಿಬ್ಬಂದಿಗಳಾದ ಜೀವನ್, ವಸಂತ್, ರವಿ ಹಾಗೂ ಶಿವಪ್ರಸಾದ್ ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!