ಕೋವಿಡ್ ಸುರಕ್ಷಾ ನಿಯಮಗಳ ಪಾಲನೆ ಕಡ್ಡಾಯವಾಗಲಿ: ಡಾ. ಮಧುಸೂದನ್ ನಾಯಕ್

 ಕೋವಿಡ್ ಸುರಕ್ಷಾ ನಿಯಮಗಳ ಪಾಲನೆ ಕಡ್ಡಾಯವಾಗಲಿ: ಡಾ. ಮಧುಸೂದನ್ ನಾಯಕ್
Share this post

ಉಡುಪಿ, ಏಪ್ರಿಲ್ 07, 2021: ಕಳೆದ ವರ್ಷದಿಂದ ಇಡೀ ವಿಶ್ವವು ಕೊರೊನಾ ಮಾರಕ ವೈರಸ್‌ಗೆ ತುತ್ತಾಗಿದ್ದು, ಪ್ರಸುತ್ತ ದಿನದಲ್ಲಿ ಕೋವಿಡ್‌ಗೆ ಲಸಿಕೆ ದೊರೆತಿದೆ. ಸಾರ್ವಜನಿಕರು  ಕೊರೋನಾ ಲಸಿಕೆ ತೆಗೆದುಕೊಳ್ಳವುದರ ಜೊತೆಗೆ ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಕೋವಿಡ್ ತಡೆಗಟ್ಟಲು ಸಹಕರಿಸಬೇಕು ಎಂದು ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ಹೇಳಿದರು.

ಅವರು ಇಂದು ನಗರದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯಲ್ಲಿ ಆಯೋಜಿಸಿದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಳೆದ ವರ್ಷ ಕೋವಿಡ್ ಸಮಯದಲ್ಲಿ ರಕ್ತದಾನ ಶಿಬಿರಗಳು ನಡೆಯದ ಕಾರಣ ಜಿಲ್ಲೆಯಲ್ಲಿ ರಕ್ತ ಶೇಖರಣೆಯಲ್ಲಿ ಕೊರತೆ ಉಂಟಾಗಿದ್ದು, ಆದರೆ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯು ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ರಕ್ತದ ಕೊರತೆ ನೀಗಿಸುವಲ್ಲಿ ನೆರವಾಗಿದ್ದು, ಕೋವಿಡ್ ಸಮಯದಲ್ಲಿ ಅನೇಕ ಸಾಮಾಜಿಕ ಸೇವೆಗಳನ್ನು ನೀಡುತ್ತಾ ಬಂದಿದೆ ಎಂದು ಹೇಳಿದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಡಾ.ತಲ್ಲೂರು ಶಿವರಾಮ್ ಶೆಟ್ಟಿ ಮಾತನಾಡಿ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಆದ್ದರಿಂದ ಉಪಯುಕ್ತವಾದ ಆಹಾರ ಸೇವನೆ ಮಾಡುವುದು ಒಳಿತು. ಆರೋಗ್ಯಕರವಾದ ಆಹಾರ ಸೇವನೆ, ಒತ್ತಡ ರಹಿತವಾದ ಜೀವನ ಸಾಗಿಸುವುದು ಹಾಗೂ ಮಾನಸಿಕ ಆರೋಗ್ಯದ ಕಡೆ ಹೆಚ್ಚು ಗಮನಹರಿಸಿ, ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚು ಕಾಳಜಿ ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಧನ್ವಂತರಿ ನರ್ಸಿಂಗ್ ಕಾಲೇಜಿನ ಉಪನ್ಯಾಸಕಿ ಲೀಲಾವತಿ ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಉಪ ಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ ಸ್ವಾಗತಿಸಿ, ಕಾರ್ಯದರ್ಶಿ ಕೆ.ಜಯರಾಮ್ ಆಚಾರ್ಯ ಸಾಲಿಗ್ರಾವi ನಿರೂಪಿಸಿ, ಖಜಾಂಜಿ ಡಾ.ಅರವಿಂದ ನಾಯ್ಕ್ ಅಮ್ಮುಂಜೆ ವಂದಿಸಿದರು.

Subscribe to our newsletter!

Other related posts

error: Content is protected !!