ಏ. 17 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ
ಕಾರವಾರ ಏಪ್ರಿಲ್ 15, 2021: ವಿದ್ಯುತ್ ಸಂಬಂಧಿತ ಸಮಸ್ಯೆಗಳ ಕುರಿತು ಹೊನ್ನಾವರ ಉಪ-ವಿಭಾಗ ವ್ಯಾಪ್ತಿಯಲ್ಲಿ ಏ.17ರಂದು ಗ್ರಾಹಕರ ಕುಂದು ಕೊರತೆ ಸಭೆಯನ್ನು ಆಯೋಜಿಸಲಾಗಿದೆ ಎಂದು ಹೊನ್ನಾವರ ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರ 4 ಗಂಟೆಗೆ ಹೊನ್ನಾವರದ ಉಪ ವಿಭಾಗ ಕಛೇರಿಯಲ್ಲಿ ನಡೆಯಲಿರುವ ಸಭೆಗೆ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯತ್ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕಾಗಿ ತಿಳಿಸಿದ್ದಾರೆ.